ಧುರಂಧರ್ 2’ ಬಿಡುಗಡೆ ಮುಂದಕ್ಕೆ ?

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗುವ ಮಾರ್ಚ್ 19ರಂದು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಲಾಗುತ್ತದೆ ಎನ್ನಲಾಗುತ್ತಿದೆ.

ಧುರಂಧರ್ 2’ ಸಿನಿಮಾದ ಚಿತ್ರೀಕರಣ ಇನ್ನೂ ನಡೆಯುತ್ತಿದೆ. ನಿಗದಿತ ಸಮಯಕ್ಕೆ ಸಿನಿಮಾದ ಚಿತ್ರೀಕರಣ ಮುಗಿಯುವುದಿಲ್ಲ ಎನ್ನಲಾಗುತ್ತಿದೆ. ವಾರದ ಹಿಂದೆ ಮುಂಬೈನಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಮುಂಬೈ ಪಾಲಿಕೆಯ ನಿಯಮಗಳನ್ನು ಉಲ್ಲಂಘಿಸಿ ಚಿತ್ರೀಕರಣ ಮಾಡಿದ್ದಕ್ಕೆ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ. ಚಿತ್ರೀಕರಣಕ್ಕೆ ಬಳಸಿದ್ದ ಕೆಲವು ವಸ್ತುಗಳನ್ನು ಸೀಜ್ ಮಾಡಲಾಗಿದೆ.

ಸಿನಿಮಾದ ಚಿತ್ರೀಕರಣ ತಡವಾಗುತ್ತಿರುವ ಕಾರಣದಿಂದ ಪೋಸ್ಟ್ ಪ್ರೊಡಕ್ಷನ್ ತಡವಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗುತ್ತಿದೆ.

‘ಧುರಂಧರ್ 2’ ಟ್ರೈಲರ್ ಮಾರ್ಚ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ. ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಚಿತ್ರತಂಡ ಪ್ಲಾನ್ ಮಾಡಿದೆ. ರಣ್ವೀರ್ ಸಿಂಗ್ ಅವರನ್ನು ಎರಡು ಲುಕ್​​ಗಳಲ್ಲಿ ‘ಧುರಂಧರ್ 2’ ಟ್ರೈಲರ್​​ನಲ್ಲಿ ತೋರಿಸಲಾಗುತ್ತದೆ ಎನ್ನಲಾಗುತ್ತಿದೆ. ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಟ್ರೈಲರ್​​ನಲ್ಲಿ ಘೋಷಿಸಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!