ನಟಿ ಐಶ್ವರ್ಯಾಅರೆಸ್ಟ್

ಚಲನಚಿತ್ರ ನಿರ್ದೇಶಕರನ್ನು ಕಿಡ್ನ್ಯಾಪ್ ಮಾಡಿ  ಚಿನ್ನಾಭರಣ ಹಾಗೂ ಹಣ ದೋಚಿದ್ದ ಪ್ರಕರಣದಲ್ಲಿ ಪೊಲೀಸರು ನಟಿ ಐಶ್ವರ್ಯಾ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ.

ನಿರ್ದೇಶಕ ಅನೀಶ್ ತನ್ನ ಕಾರು ಮಾರಾಟದ ಕುರಿತು ಐಶ್ವರ್ಯಾಗೆ ಮಾಹಿತಿ ನೀಡಿದ್ದರು.  ಈ ಮಾಹಿತಿಯನ್ನು ಆಧರಿಸಿ ಆರೋಪಿಗಳು ಕಾರು ಖರೀದಿಸುವುದಾಗಿ ಹೇಳಿ ಐಶ್ವರ್ಯಾ ಮೂಲಕ ಸಂಪರ್ಕ ಸಾಧಿಸಿ  ಕಾರು ಖರೀದಿ ಮಾಡುವ ನೆಪದಲ್ಲಿ ನಿರ್ದೇಶಕನನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಅನೀಶ್ ಕೆಲವು ಕಾರಣಗಳಿಂದ ಸಿನಿಮಾ ನಿಲ್ಲಿಸಿ ಮುಂಬೈಗೆ ಸ್ಥಳಾಂತರವಾಗಿದ್ದರು.

ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನೀಶ್ ನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ, ಬಳಿಕ ಆರೋಪಿಗಳು ಬ್ಯಾಡರಹಳ್ಳಿಯ ಮನೆಯೊಂದರಲ್ಲಿ ಇರಿಸಿ ಕ್ರಿಕೆಟ್ ಸ್ಟಂಪ್ ಮತ್ತು ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ್ದರು.  ಅವರ ಬಳಿ ಇದ್ದ ಚಿನ್ನಾಭರಣ ಮತ್ತು ಹಣವನ್ನು ಕಿತ್ತುಕೊಂಡಿದ್ದರು. ನಂತರ ತುಮಕೂರು ಜಿಲ್ಲೆಯ ಮಧುಗಿರಿ ಬಳಿ  ಬಿಟ್ಟು ಪರಾರಿಯಾಗಿದ್ದರು.

ಈ ಸಂಬಂಧ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಐಶ್ವರ್ಯಾ  ಸೇರಿ ಹನ್ನೊಂದು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಆಶೀರ್ವಾದ್  ಎಂಬಾತ ಈ ಕೃತ್ಯದ ಸಂಚು ರೂಪಿಸಿದ್ದಾನೆ ಎಂದು ತಿಳಿದು ಬಂದಿದೆ.

ಹಣದ ವಿಚಾರವಾಗಿ ಉಂಟಾದ ಜಗಳ ಕಿಡ್ನ್ಯಾಪ್‌ಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.  ಬಂಧಿತರನ್ನು ವಿಚಾರಣೆಗೊಳಪಡಿಸಲಾಗಿದ್ದು,  ಆಡುಗೋಡಿ ಪೊಲೀಸರು  ತನಿಖೆ ಮುಂದುವರಿಸಿದ್ದಾರೆ.

ಅನೀಶ್ ಇತ್ತೀಚೆಗೆ “ಜೀವನದ ಭಾಷೆ” ಎಂಬ ಸಿನಿಮಾವನ್ನು ನಿರ್ದೇಶಿಸುತ್ತಿದ್ದರು. ಈ ಹಿಂದೆ “ಭರವಸೆಯ ಜೀವನ” ಎಂಬ ಶಾರ್ಟ್ ಮೂವಿ ನಿರ್ಮಿಸಿದ್ದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!