ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ.
‘ಹಯಗ್ರೀವ’ ಸಿನಿಮಾ ಇಂದು ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಿನಿಮಾತಂಡ ಮಾಡಿತ್ತು. ಆದರೆ ಸೆನ್ಸಾರ್ ಸಮಸ್ಯೆಯಿಂದಾಗಿ ಸಿನಿಮಾದ ಮೊದಲ ಎರಡು ಶೋಗಳು ಅಂದರೆ ಬೆಳಿಗ್ಗೆ 10.30 ಮತ್ತು ಮಧ್ಯಾಹ್ನ 1.30ಗೆ ಪ್ರದರ್ಶನ ಆಗಬೇಕಿದ್ದ ಶೋಗಳು ರದ್ದಾಗಿವೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಚಿತ್ರತಂಡ, ‘ಅನಿವಾರ್ಯ ಕಾರಣಗಳಿಂದ ನಮ್ಮ ಸಿನಿಮಾದ ದಿನದ ಮೊದಲ ಎರಡೂ ಶೋಗಳು ರದ್ದಾಗಿದ್ದು, ಸಂಜೆ 4.30ರ ಶೋನಿಂದ ರಾಜ್ಯದಾದ್ಯಂತ ಅದ್ಧೂರಿಯಾಗಿ ಪ್ರಾರಂಭ ಆಗುತ್ತವೆ. ನೋಡಿ ಹರಸಿ’ ಎಂದಿದೆ.
‘ಹಯಗ್ರೀವ’ ಸಿನಿಮಾದಲ್ಲಿ ಹಿಂದೂ ದೇವತೆಗಳ ಉಲ್ಲೇಖ ಇದೆ. ಕೆಲವು ದೃಶ್ಯಗಳಲ್ಲಿ ಹಿಂದೂ ದೇವತೆಗಳ ಚಿತ್ರಗಳನ್ನು ಅಥವಾ ಮುಖವನ್ನು ತಿರುಚಿರುವ ದೃಶ್ಯಗಳು ಇವೆ ಎನ್ನಲಾಗಿದೆ. ಈ ಕಾರಣಕ್ಕೆ ಸೆನ್ಸಾರ್ ಮಂಡಳಿ ಸಿನಿಮಾವನ್ನು ರಿವೈಸ್ ಕಮಿಟಿಗೆ ಕಳಿಸಿದ್ದು, ರಿವೈಸ್ ಕಮಿಟಿ ಸಿನಿಮಾ ನೋಡಿದ ಬಳಿಕ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಗಲಿದೆ. ಈ ಕಾರಣಕ್ಕೆ ಸಿನಿಮಾದ ಬಿಡುಗಡೆ ವಿಳಂಬ ಆಗುತ್ತಿದೆ.
ಸಿನಿಮಾದಲ್ಲಿ ಧನ್ವೀರ್ ಗೌಡ ಮತ್ತು ಸಂಜನಾ ಆನಂದ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಸಾಧುಕೋಕಿಲ, ಶೋಭರಾಜ್ ನಟಿಸಿದ್ದಾರೆ.
—–





Be the first to comment