ರಣವೀರ್ ಸಿಂಗ್ ನಟನೆಯ ‘ಧುರಂಧರ್ 2: ದಿ ರಿವೇಂಜ್’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಮಾರ್ಚ್ 7ರಿಂದ ಆರಂಭವಾಗಲಿದೆ.
ಪ್ರಮುಖ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ‘ಧುರಂಧರ್ 2’ ಸಿನಿಮಾದ ಟಿಕೆಟ್ ಮಾರಾಟ ಶುರುವಾಗಲಿದೆ. ವಿದೇಶಗಳಲ್ಲಿ ಈಗಾಗಲೇ ಟಿಕೆಟ್ ಬುಕ್ಕಿಂಗ್ ಭರ್ಜರಿ ಪ್ರಮಾಣದಲ್ಲಿ ನಡೆಯುತ್ತಿದೆ.
ಚಿತ್ರದ ಉದ್ದ 4 ಗಂಟೆ ಮತ್ತು ಅಭಿಮಾನಿಗಳ ಬೇಡಿಕೆ ಕಾರಣ ಮಲ್ಟಿಪ್ಲೆಕ್ಸ್ ಗಳು ಟಿಕೆಟ್ ದರ ಹೆಚ್ಚಳ ಮಾಡುವ ನಿರ್ಧಾರಕ್ಕೆ ಬಂದಿವೆ. ಚಿತ್ರ ಬಿಡುಗಡೆಗೂ ಮುನ್ನ 10 ಲಕ್ಷಕ್ಕೂ ಹೆಚ್ಚು ಟಿಕೆಟ್ ಮಾರಾಟವಾಗುವ ನಿರೀಕ್ಷೆ ಇದೆ. ಸಿನಿಮಾ ಮೊದಲ ದಿನ 85 ಕೋಟಿ ರೂ. ಗಳಿಸುವ ನಿರೀಕ್ಷೆ ಇದೆ.
ಸಿನಿಮಾ ಯುಗಾದಿ ಮತ್ತು ಈದ್ ಹಬ್ಬದ ಪ್ರಯುಕ್ತ ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಮಾರ್ಚ್ 19 ರಂದು ತೆರೆ ಕಾಣಲಿದೆ.
ಇಂದು ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.





Be the first to comment