ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸಿರುವ ‘ಲವ್ ಮಾಕ್ಟೇಲ್ 3’ ಟ್ರೈಲರ್ ಬಿಡುಗಡೆ ಆಗಿದೆ.
ಚಿತ್ರದ ಟ್ರೈಲರ್ ನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರ ಪುತ್ರಿ ಪರಿ ಬಿಡುಗಡೆಗೊಳಿಸಿದ್ದಾರೆ.
ಈ ಹಿಂದೆ ಚಿತ್ರದ ಮೊದಲ ಭಾಗದ ಟ್ರೈಲರ್ ನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಎರಡನೇ ಭಾಗದ ಟ್ರೈಲರ್ ನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆಗೊಳಿಸಿದ್ದರು ಚಿತ್ರದ ಮೂರನೇ ಭಾಗದ ಟ್ರೈಲರ್ ನ್ನು ಕೃಷ್ಣ ಮಗಳೇ ಬಿಡುಗಡೆಗೊಳಿಸಿರುವುದು ವಿಶೇಷವಾಗಿದೆ.
ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಹಾಗೂ ಈ ಚಿತ್ರಕ್ಕೆ ಒಂದು ಹಾಡು ಬರೆದಿರುವ ಶಶಾಂಕ್ ಇದ್ದರು. ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಸುಪ್ರೀತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ಅಮೃತಾ ಅಯ್ಯಂಗಾರ್, ಗೀತರಚನೆಕಾರ ರಾಘವೇಂದ್ರ ಕಾಮತ್, ನಟ ಜಗದೀಶ್, ರೆಚೆಲ್ ಡೇವಿಡ್, ಶ್ರೀ ಕ್ರೇಜಿ ಮೈಂಡ್ಸ್, ಸಂವೃತ, ಅಭಿಲಾಶ್, ರಜನಿ, ನಯಾರಾ ಸೇರಿದಂತೆ ಚಿತ್ರತಂಡದ ಹಲವರು ಉಪಸ್ಥಿತರಿದ್ದರು.
ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ.





Be the first to comment