‘ನಾನು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿಲ್ಲ’ ಎಂದು 2025ರ ಕುಂಭಮೇಳದ ವೇಳೆ ರಾತ್ರೋರಾತ್ರಿ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದ ಮೊನಾಲಿಸಾ ಭೋಸ್ಲೆ ಹೇಳಿದ್ದಾರೆ.
‘ನಾವು ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದೇವೆ. ಹಾಗಾಗಿ ಇದು ಲವ್ ಜಿಹಾದ್ ಅಲ್ಲ’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಮೊನಾಲಿಸಾ ಅವರು ತಮ್ಮ ಪ್ರಿಯಕರ ಫರ್ಮಾನ್ ಖಾನ್ ಅವರೊಂದಿಗೆ ಕೇರಳದ ನಯನಾರ್ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಮದುವೆಯ ನಂತರ ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುತ್ತಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
“ಈ ಮದುವೆಗೆ ಮೊದಲು ಫರ್ಮಾನ್ ಒಪ್ಪಿರಲಿಲ್ಲ. ನಾನೇ ಒತ್ತಾಯ ಮಾಡಿ ಮದುವೆ ಆಗುವಂತೆ ಮಾಡಿದೆ” ಎಂದು ಹೇಳಿದ್ದಾರೆ.
ಫರ್ಮಾನ್ ಖಾನ್, “ನಾವಿಬ್ಬರೂ ಕಲಾವಿದರು. ಎಲ್ಲಾ ಧರ್ಮಗಳನ್ನೂ ಗೌರವಿಸುತ್ತೇವೆ. ಪ್ರೀತಿಯಲ್ಲಿ ಧರ್ಮ ಬದಲಾಯಿಸುವ ಅಗತ್ಯವಿಲ್ಲ,” ಎಂದು ಹೇಳಿದ್ದಾರೆ.
“ತಮ್ಮ ತಂದೆ ಬಲವಂತವಾಗಿ ಊರಿಗೆ ಕರೆದೊಯ್ದು ಸೋದರ ಸಂಬಂಧಿಯೊಂದಿಗೆ ಮದುವೆ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಮೊನಾಲಿಸಾ ಆರೋಪಿಸಿದ್ದಾರೆ.
ಇದಲ್ಲದೆ ಮೊನಾಲಿಸಾ ತಮಗೆ 18 ವರ್ಷ ತುಂಬಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪೊಲೀಸರು ಜನ್ಮದಾಖಲೆ ಪರಿಶೀಲಿಸಿದ್ದು, ಇಬ್ಬರೂ ವಯಸ್ಕರಾಗಿರುವುದರಿಂದ ತಮ್ಮ ಆಯ್ಕೆಯಂತೆ ಬದುಕುವ ಹಕ್ಕು ಅವರಿಗೆ ಇದೆ ಎಂದು ಹೇಳಿದ್ದಾರೆ.
—-





Be the first to comment