ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ 4.31 ಕೋಟಿ ದೇಣಿಗೆ!

ಬೆಂಗಳೂರು : ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಗೋಲ್ಡನ್ ಜ್ಯೂಬಿಲಿ ಫೌಂಡೇಶನ್, ಬೆಂಗಳೂರಿನ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಿದೆ.

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆ

ಸುಮಾರು 4.31 ಕೋಟಿ ಮೌಲ್ಯದ 64-ಸ್ಲೈಸ್ CT ಸ್ಕ್ಯಾನ್ ಯಂತ್ರ ಹಾಗೂ ಹಾರ್ಟ್-ಲಂಗ್ ಮಷೀನ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಉಪಕರಣಗಳು ಕ್ಯಾನ್ಸರ್ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಮಹತ್ವದ ನೆರವಾಗಲಿದ್ದು, ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಸಾವಿರಾರು ರೋಗಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್ಐಸಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆರ್ ದೊರೆಸ್ವಾಮಿ ಅವರು ಮಾತನಾಡಿ, ಸಮಾಜಕ್ಕೆ ಉಪಕಾರವಾಗುವ ಸಂಸ್ಥೆಗಳೊಂದಿಗೆ ಕೈಜೋಡಿಸುವುದು ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನ ಮುಖ್ಯ ಉದ್ದೇಶವಾಗಿದೆ. ಈ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ. ಈ ದೇಣಿಗೆಯಿಂದ ಇನ್ನಷ್ಟು ಜನರಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿದೆ ಎಂದು ಹೇಳಿದರು.

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆ

ಆಸ್ಪತ್ರೆಯ ಪರವಾಗಿ ಮಾತನಾಡಿದ ಡಾ. ಬಿ ಎಸ್ ಶ್ರೀನಾಥ್ ಅವರು, ಈ ಅತ್ಯಾಧುನಿಕ ಯಂತ್ರಗಳ ದೇಣಿಗೆಯಿಂದ ನಮ್ಮ ಚಿಕಿತ್ಸಾ ಸಾಮರ್ಥ್ಯ ಬಹಳಷ್ಟು ವೃದ್ಧಿಯಾಗಿದೆ. ಸಾವಿರಾರು ರೋಗಿಗಳಿಗೆ ಇದರಿಂದ ನೇರ ಪ್ರಯೋಜನವಾಗಲಿದೆ. ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ಮತ್ತು ಡಾ. ಆರ್. ದೊರೆಸ್ವಾಮಿ ಸೇರಿದಂತೆ ಅವರ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಲ್ ಐ ಸಿಯ ಹಿರಿಯ ಅಧಿಕಾರಿಗಳಾದ ಶ್ರೀ ಪುನೀತ್ ಕುಮಾರ್, ಆಶಿಶ್ ಕುಮಾರ್ ಪರಸ್ ನಾಥ್ ಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!