ದಕ್ಷಿಣ ಭಾರತದ ಚಿತ್ರರಂಗದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ.
ಅನುಷ್ಕಾ ಅವರ ಮೊದಲ ಮಲಯಾಳಂ ಸಿನಿಮಾ ‘ಕಥನಾರ್’ ಟ್ರೈಲರ್ ಬಿಡುಗಡೆ ಆಗಿದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದೆ.ಕೇರಳದ ಜಾನಪದ ಕಥೆಗಳಲ್ಲಿ ಪ್ರಸಿದ್ಧನಾದ ಮಾಂತ್ರಿಕ ಪಾದ್ರಿ ‘ಕಡಮತ್ತತ್ತು ಕಥನಾರ್’ ಜೀವನ ಆಧರಿಸಿ ಈ ಸಿನಿಮಾ ರೂಪಿಸಲಾಗಿದೆ. 2 ನಿಮಿಷ 58 ಸೆಕೆಂಡ್‌ಗಳ ಟ್ರೈಲರ್ ವಿಭಿನ್ನ ಫ್ಯಾಂಟಸಿ-ಹಾರರ್ ಲೋಕಕ್ಕೆ ಕರೆದೊಯ್ಯುತ್ತದೆ.
ರೋಜನ್ ಥಾಮಸ್ ನಿರ್ದೇಶನದ ಈ ಚಿತ್ರ ಸಾಂಪ್ರದಾಯಿಕ ಕಥನವಾಗಿರದೆ, ಆಧುನಿಕ ತಂತ್ರಜ್ಞಾನ ಮತ್ತು ಭಯಾನಕ ಅಂಶಗಳನ್ನು ಮಿಶ್ರಣ ಮಾಡಿದ ಪ್ರಯತ್ನವಾಗಿದೆ. ಚಿತ್ರದಲ್ಲಿ ಸಿಜಿಐ ಮತ್ತು ವಿಎಫ್‌ಎಕ್ಸ್ ಬಳಕೆ ಗಮನಾರ್ಹವಾಗಿದೆ. ದೃಶ್ಯ ವೈಭವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಚಿತ್ರಕ್ಕೆ ರಾಹುಲ್ ಸುಬ್ರಮಣಿಯನ್ ಸಂಗೀತ ನೀಡಿದ್ದಾರೆ.
ಸಿನಿಮಾದಲ್ಲಿ ಜಯಸೂರ್ಯ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅನುಷ್ಕಾ ಶೆಟ್ಟಿ ‘ನೀಲಿ’ ಎಂಬ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಭುದೇವ, ವಿನೀತ್ ಮತ್ತು ಸಂದೀಪ್ ಮಾಸ್ಟರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
‘ಶ್ರೀ ಗೋಕುಲಂ ಮೂವೀಸ್’ ಬ್ಯಾನರ್ ಅಡಿಯಲ್ಲಿ ಗೋಕುಲಂ ಗೋಪಾಲನ್ ನಿರ್ಮಿಸಿರುವ ಈ ಸಿನಿಮಾ ಮಲಯಾಳಂ, ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
—-





Be the first to comment