ಸೂಪರ್ಸ್ಟಾರ್ ರಜನಿಕಾಂತ್ ಅವರು ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ‘ಜೈಲರ್ 2’ ಸಿನಿಮಾದ ಶೂಟಿಂಗ್ ಅಂತಿಮ ಹಂತ ತಲುಪಿರುವುದಾಗಿ ತಿಳಿಸಿದ್ದಾರೆ.
2ರಿಂದ 3 ದಿನಗಳ ಚಿತ್ರೀಕರಣ ಬಾಕಿ ಇದ್ದು, ‘ಜೈಲರ್ 2’ ಸಿನಿಮಾದ ಶೂಟಿಂಗ್ ಶೀಘ್ರದಲ್ಲೇ ಶೂಟಿಂಗ್ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ.
ರಜನಿಕಾಂತ್ ಅವರು ಈ ಸಿನಿಮಾದಲ್ಲಿ ಅವರು ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದೇ ವೇಳೆ, ಬಹಳ ವರ್ಷಗಳ ನಂತರ ಕಮಲ್ ಹಾಸನ್ ಜೊತೆಗಿನ ಹೊಸ ಪ್ರಾಜೆಕ್ಟ್ ಕುರಿತೂ ರಜನಿ ಅವರು ಮಾಹಿತಿ ನೀಡಿದ್ದಾರೆ.
‘ಈ ಚಿತ್ರದ ಕಥೆ ಈಗಾಗಲೇ ಫೈನಲ್ ಆಗಿದ್ದು, ಆಗಸ್ಟ್ ತಿಂಗಳಿಂದ ಚಿತ್ರೀಕರಣ ಆರಂಭವಾಗಲಿದೆ. ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಅಧಿಕೃತವಾಗಿ ಘೋಷಿಸಲಿದ್ದಾರೆ’ ಎಂದು ಹೇಳಿದ್ದಾರೆ.
ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರದ ವಿಳಂಬದ ಬಗ್ಗೆ ಕೇಳಿದ ಪ್ರಶ್ನೆಗೆ ರಜನಿಕಾಂತ್ ಮೌನ ವಹಿಸಿದ್ದಾರೆ. ‘ಕ್ಷಮಿಸಿ, ಈ ಪ್ರಶ್ನೆಗೆ ಉತ್ತರಿಸಲು ಇಷ್ಟಪಡುವುದಿಲ್ಲ’ ಎಂದು ರಜನಿಕಾಂತ್ ಪ್ರತಿಕ್ರಿಯಿಸಿದ್ದಾರೆ.
‘ಜನ ನಾಯಗನ್’ ಸಿನಿಮಾ ಜನವರಿ 9ರಂದು ಸಂಕ್ರಾಂತಿ ವೇಳೆ ಬಿಡುಗಡೆಯಾಗಬೇಕಾಗಿತ್ತು. ಆದರೆ ಸೆನ್ಸಾರ್ ಪ್ರಮಾಣಪತ್ರ ವಿಳಂಬದಿಂದ ಸಿನಿಮಾ ಮುಂದೂಡಲ್ಪಟ್ಟಿದೆ. ಬಿಡುಗಡೆ ವಿಳಂಬದ ಹಿಂದೆ ರಾಜಕೀಯ ಪಿತೂರಿ ಇದೆ ಎಂಬ ಆರೋಪವೂ ಕೇಳಿ ಬರುತ್ತಿದೆ.
—-





Be the first to comment