ಝಾಂಬಿ ಡ್ರಗ್ ಸೇವನೆ ಎಂಬ ಹೆಸರಿನಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ತಪ್ಪು ಮಾಹಿತಿ ಹಂಚಿದ ನಟ ದುನಿಯಾ ವಿಜಯ್, ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ 25 ಮಂದಿಗೆ ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ.
ಡ್ರಗ್ ಸೇವನೆ ಎಂಬ ಹೆಸರಿನಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ತಪ್ಪು ಮಾಹಿತಿ ಹಂಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿರುವ ಯುವಕನನ್ನು ವೈದ್ಯಕೀಯವಾಗಿ ಪರೀಕ್ಷಿಸಲಾಗಿದ್ದು ಆತ ಯಾವುದೇ ಝಾಂಬಿ ಡ್ರಗ್ ಸೇವಿಸಿಲ್ಲ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಆತ ಕ್ಷಮೆಯಾಚಿಸಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋವನ್ನು ಹಂಚಿಕೊಂಡವರಿಗೂ ನೋಟಿಸ್ ನೀಡಲಾಗುವುದು ಎಂದು ಹೇಳಿದ್ದಾರೆ.
ಆಧಾರರಹಿತ ಮಾಹಿತಿಯನ್ನು ಹಂಚುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮೆಡಿಕಲ್ ವರದಿ ಆಧಾರದ ಮೇಲೆ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಬೇಕು. ಯಾರೊಬ್ಬರ ಮೇಲೂ ಅಪಪ್ರಚಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ವಿದೇಶಗಳಲ್ಲಿ ಇರುವ ಡ್ರಗ್ ಬಳಕೆಯ ಉದಾಹರಣೆಯನ್ನು ಉಲ್ಲೇಖಿಸಿ ಈ ವಿಡಿಯೋ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವಿಡಿಯೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ.
—–





Be the first to comment