ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ “ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್‌ಅಪ್ಸ್” ಬಗ್ಗೆ ಹಾಲಿವುಡ್ ಮಟ್ಟದಲ್ಲಿ ಪ್ರಚಾರಾತ್ಮಕ ಸಂದರ್ಶನ ನೀಡಿದ್ದಾರೆ.
ಲಾಸ್ ಏಂಜಲೀಸ್‌ನಲ್ಲಿ ನಡೆದ CinemaCon 2026 ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ಟಾಕ್ಸಿಕ್ ಸಾಮಾನ್ಯ ಆಕ್ಷನ್ ಗ್ಯಾಂಗ್ಸ್ಟರ್ ಸಿನಿಮಾ ಅಲ್ಲ ಎಂದು ಹೇಳಿದ್ದಾರೆ.
ಟಾಕ್ಸಿಕ್ ಚಿತ್ರವನ್ನು ಪದರಗಳಿಂದ ಕೂಡಿದ ಚಿತ್ರವೆಂದು ಹೇಳಬಹುದು. ಹೊರಗೆ ನೋಡಲು ಇದು ಸಾಮಾನ್ಯ ಆಕ್ಷನ್ ಸಿನಿಮಾ ಅನ್ನಿಸಬಹುದು. ಆದರೆ ಇದರೊಳಗೆ ಆಳವಾದ ಮನೋವಿಜ್ಞಾನ ಮತ್ತು ಸಂಕೀರ್ಣತೆಯಿದೆ ಎಂದು ಹೇಳಿದ್ದಾರೆ.
ಟಾಕ್ಸಿಕ್ ಮಹತ್ವಾಕಾಂಕ್ಷೆಯ ಚಿತ್ರ. ಮೊದಲ ಬಾರಿಗೆ ನಾವು ಈ ಸಿನಿಮಾವನ್ನು ಇಂಗ್ಲಿಷ್‌ನಲ್ಲಿಯೂ ಶೂಟ್ ಮಾಡಿದ್ದೇವೆ. ಈ ಸಿನಿಮಾ ಒಂದು ಡಾರ್ಕ್ ಅಥವಾ ಋಣಾತ್ಮಕ ಪಾತ್ರವನ್ನು ಬಹಳ ಭಿನ್ನ ರೀತಿಯಲ್ಲಿ ಪ್ರೆಸೆಂಟ್ ಮಾಡುತ್ತದೆ. ಕೆಲವು ಅದ್ಭುತವಾದ ತಂತ್ರಜ್ಞರು ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ನಿರ್ದೇಶಕಿ ಗೀತು ಮೋಹನ್ದಾಸ್, ಗ್ಯಾಂಗ್ಸ್ಟರ್ ಸಿನಿಮಾವನ್ನು ಸಂಪೂರ್ಣ ಭಿನ್ನ ದೃಷ್ಟಿಕೋನದಿಂದ ಕಟ್ಟಿ ಕೊಟ್ಟಿದ್ದಾರೆ. ನಾನಂತೂ ಆ ಸಿನಿಮಾನಲ್ಲಿ ನಟಿಸುವುದನ್ನು ಎಂಜಾಯ್ ಮಾಡಿದ್ದೇನೆ. ಸಿನಿಮಾ ಕಣ್ಣಿಗೆ ಹಬ್ಬ ಆಗಲಿದೆ ಎಂದು ಹೇಳಿದ್ದಾರೆ.
ಈ ಚಿತ್ರ ಭಾರತೀಯ ಭಾವನೆಗಳನ್ನಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪ್ರೇಕ್ಷಕರಿಗೆ ತಲುಪುವ ಸಿನಿಮಾ ಆಗಿದೆ ಎಂದು ತಿಳಿಸಿದ್ದಾರೆ.





Be the first to comment