‘ಟಾಕ್ಸಿಕ್’ ಕಥೆ ಹೇಳಿದ ಯಶ್

ಈ ತಿಂಗಳು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಕಥೆಯನ್ನು ಸ್ವತಃ ಯಶ್ ಬಹಿರಂಗ ಮಾಡಿದ್ದಾರೆ.

ವಿದೇಶಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಯಶ್ ತಮ್ಮ ಚಿತ್ರದ ಕಥೆಯ ಕೆಲವು ಪ್ರಮುಖ ಅಂಶಗಳನ್ನು ಬಹಿರಂಗಪಡಿಸಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.

ಈ ಸಿನಿಮಾ ಸಾಮಾನ್ಯ ಗ್ಯಾಂಗ್‌ಸ್ಟರ್ ಕಥೆಯಲ್ಲ. ಇದು ತಂದೆ-ಮಗನ ನಡುವಿನ ಸೇಡಿನ ಕಥೆಯಾಗಿದೆ. 1961ರವರೆಗೆ ಪೋರ್ಚುಗೀಸ್ ಆಳ್ವಿಕೆಯಲ್ಲಿ ಇದ್ದ ಗೋವಾದ ಕಾಲಘಟ್ಟವನ್ನು ಕಥೆಯ ಹಿನ್ನೆಲೆಯಾಗಿ ಬಳಸಿಕೊಂಡಿರುವುದಾಗಿ ಯಶ್ ತಿಳಿಸಿದ್ದಾರೆ.

ಯಶ್, ನಿರ್ದೇಶಕಿ ಗೀತು ಮೋಹನ್ ದಾಸ್ ಅವರೊಂದಿಗೆ ‘ಟಾಕ್ಸಿಕ್’ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟೀಸರ್ ಮೂಲಕ ಕುತೂಹಲ ಮೂಡಿಸಿರುವ ಟಾಕ್ಸಿಕ್ ಚಿತ್ರದ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಚಿತ್ರ ಬಹು ಭಾಷೆಗಳಲ್ಲಿ ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾಗುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!