ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ 2’ ಚಿತ್ರದ ಒಟಿಟಿ ಹಕ್ಕುಗಳನ್ನು ಸುಮಾರು 160 ಕೋಟಿ ರೂಪಾಯಿಗೆ ಅಮೆಜಾನ್ ಪ್ರೈಮ್ ಖರೀದಿಸಿದೆ.
ಇದು ತಮಿಳು ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಒಟಿಟಿ ಡೀಲ್ ಎನ್ನಲಾಗುತ್ತಿದೆ. ಈ ಮೂಲಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಡಿಜಿಟಲ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ.
ಈ ಹಿಂದೆ ಕಮಲ್ ಹಾಸನ್ ಮತ್ತು ಮಣಿರತ್ನಂ ಅವರ ‘ಥಗ್ ಲೈಫ್’ ಸಿನಿಮಾ 150 ಕೋಟಿಗೆ ಒಟಿಟಿ ಮಾರಾಟವಾಗಿ ದಾಖಲೆ ಬರೆದಿತ್ತು. ಆದರೆ ಈಗ ‘ಜೈಲರ್ 2’ ಆ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ನಿರ್ಮಿಸಿದೆ.
ಜೈಲರ್ 2 ಚಿತ್ರದಲ್ಲಿ ಶಿವರಾಜ್ಕುಮಾರ್, ಮೋಹನ್ ಲಾಲ್, ವಿಜಯ್ ಸೇತುಪತಿ ಸೇರಿದಂತೆ ದೊಡ್ಡ ತಾರಾಗಣ ಇದೆ. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಚಿತ್ರದಲ್ಲಿ ಮತ್ತೊಮ್ಮೆ ಮ್ಯಾಜಿಕ್ ಸೃಷ್ಟಿಸುವ ನಿರೀಕ್ಷೆ ಇದೆ.
ಜೈಲರ್ ಚಿತ್ರ ಸೂಪರ್ ಹಿಟ್ ಆದ ಹಿನ್ನೆಲೆಯಲ್ಲಿ ಈ ಚಿತ್ರದ ಮೇಲೆ ದೊಡ್ಡ ನಿರೀಕ್ಷೆ ಉಂಟಾಗಿದೆ.





Be the first to comment