ಭಾರತೀಯ ಚಿತ್ರರಂಗದಲ್ಲಿ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ನ ಪಾತ್ರದ ಬಗ್ಗೆ ಕಿಯಾರಾ ಅಡ್ವಾಣಿ ಮಾತನಾಡಿದ್ದಾರೆ.
ಲಾಸ್ ಏಂಜಲ್ಸ್‌ನಲ್ಲಿ ನಡೆದ ಸಿನಿಮಾ ಕಾನ್ 2026ನಲ್ಲಿ ಭಾಗವಹಿಸಿದ್ದ ಯಶ್ ಚಿತ್ರದ ಬಗ್ಗೆ ಕೆಲವು ಕುತೂಹಲಕಾರಿ ಅಂಶಗಳನ್ನು ಹಂಚಿಕೊಂಡಿದ್ದರು. ಈಗ ಬ್ರ್ಯಾಂಡ್ ಕೊಲ್ಯಾಬರೇಷನ್ ಕಾರ್ಯಕ್ರಮದಲ್ಲಿ ಕಿಯಾರಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.
‘ನಾಡಿಯಾ’ ಪಾತ್ರ ತಮ್ಮ ವೃತ್ತಿಜೀವನದಲ್ಲೇ ಅತ್ಯಂತ ವಿಭಿನ್ನ ಮತ್ತು ಸವಾಲಿನ ಪಾತ್ರವಾಗಿದೆ. ಈ ಪಾತ್ರದ ಕ್ಯಾರೆಕ್ಟರ್ ಆರ್ಕ್ ನಾನು ಇದುವರೆಗೆ ಕಂಡದ್ದಕ್ಕಿಂತ ಸಂಪೂರ್ಣ ಭಿನ್ನವಾಗಿದೆ” ಎಂದು ಅವರು ಹೇಳಿದ್ದಾರೆ.
“ನಿರ್ದೇಶಕಿ ಗೀತು ಮೋಹನ್ದಾಸ್ ಪಾತ್ರವನ್ನು ರೂಪಿಸಿದ ರೀತಿ ಮತ್ತು ಅದಕ್ಕೆ ನೀಡಿದ ಮಹತ್ವವೇ ತಮ್ಮನ್ನು ಆಕರ್ಷಿಸಿತು. ನಾನು ಸವಾಲುಗಳನ್ನು ಸ್ವೀಕರಿಸಲು ಸಿದ್ಧವಾಗಿದ್ದಾಗಲೇ ಈ ಪಾತ್ರ ಸಿಕ್ಕಿತು. ನಾನು ಸಂಪೂರ್ಣವಾಗಿ ಆ ಪಾತ್ರದಲ್ಲಿ ಬೆರೆತು ಹೋಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ.
‘ಟಾಕ್ಸಿಕ್’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮಾರ್ಚ್ 19ಕ್ಕೆ ಬಿಡುಗಡೆಯಾಗಬೇಕಿದ್ದ ಚಿತ್ರ ಜೂನ್ 4ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
_





Be the first to comment