ರನ್ಯಾ ರಾವ್‌ ವರ್ಷದ ಬಳಿಕ ಬಿಡುಗಡೆ

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾ ರಾವ್‌ ವರ್ಷದ ಬಳಿಕ ಜೈಲಿನಿಂದ ಬಿಡುಗಡೆ ಭಾಗ್ಯ ಹೊಂದಿದ್ದಾರೆ.

ರನ್ಯಾ ರಾವ್ ಅವರಿಗೆ ಜಾಮೀನು ಮಂಜೂರು ಬಗ್ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಸಂಬಂಧ 2025ರ ಮಾರ್ಚ್ 3ರಂದು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ರನ್ಯಾ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ನಲ್ಲಿ ಇರಿಸಲಾಗಿತ್ತು.

ಅವರಿಗೆ ಈ ಹಿಂದೆ ಜಾಮೀನು ಸಿಕ್ಕಿದ್ದರೂ ಕಾಫಿಪೋಸಾ ಕಾಯ್ದೆಯಡಿ ಹೊರಡಿಸಿದ್ದ ಬಂಧನ ಆದೇಶದಿಂದ ಅವರು ಹೊರಬರಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಆ ಆದೇಶವನ್ನು ರದ್ದುಪಡಿಸಿದ ಹಿನ್ನೆಲೆ ಅವರಿಗೆ ಬಿಡುಗಡೆ ಭಾಗ್ಯ ಸಾಧ್ಯವಾಗಿದೆ.

102 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣಕ್ಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ 14.213 ಕೆ.ಜಿ.ಚಿನ್ನ ಪತ್ತೆಯಾಗಿ ನಟಿಯನ್ನು ಬಂಧಿಸಲಾಗಿತ್ತು.

Be the first to comment

Leave a Reply

Your email address will not be published. Required fields are marked *

Translate »
error: Content is protected !!