ತೆಲುಗಿನಲ್ಲಿ ರಿಷಬ್ ಸಿನಿಮಾ ರಿಲೀಸ್

ರಿಷಬ್ ಶೆಟ್ಟಿ ಅವರ ಚಿತ್ರ ‘ಎ ಫಿಲ್ಮ್ ಬೈ ಗಿರಿ’ ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ.

ಇದು 2022ರಲ್ಲಿ ಬಿಡುಗಡೆಯಾಗಿದ್ದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರದ ಡಬ್. ಮೇ 8ರಂದು ಸಿನಿಮಾ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ರಿಷಬ್ ಶೆಟ್ಟಿ ಅವರು ತೆಲುಗು ರಾಜ್ಯಗಳಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿರುವ ಹಿನ್ನೆಲೆ ಈ ಚಿತ್ರವನ್ನು ಈಗ ಬಿಡುಗಡೆ ಮಾಡುವ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ಸೆಳೆಯುವ ಯತ್ನ ನಡೆದಿದೆ ಎನ್ನಲಾಗಿದೆ.

ಈ ಚಿತ್ರವನ್ನು ಕರಣ್ ಆನಂದ್ ಮತ್ತು ಅನಿರುದ್ಧ ಮಹೇಶ್ ನಿರ್ದೇಶಿಸಿದ್ದಾರೆ. ಕಥೆ ಗಿರಿ ಕೃಷ್ಣ ಬರೆದಿದ್ದಾರೆ. ರಿಷಬ್ ಶೆಟ್ಟಿ, ತಪಸ್ವಿನಿ ಪೂಣಚ್ಚ ಮತ್ತು ರಚನಾ ಇಂದರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಂದೇಶ್ ಪ್ರೊಡಕ್ಷನ್ಸ್ ಮತ್ತು ರಿಷಬ್ ಶೆಟ್ಟಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಎಂಜಿ ಮೂವೀಸ್ ಮೂಲಕ ಅಚ್ಚಿಬಾಬು ತೆಲುಗು ರಾಜ್ಯಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

2022ರಲ್ಲಿ ಕನ್ನಡದಲ್ಲಿ ಬಿಡುಗಡೆಯಾಗಿದ್ದ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ‘ಕಾಂತಾರ’ಗೂ ಮುಂಚೆ ಬಂದಿತ್ತು. ಇದು ಸಾಧಾರಣ ಯಶಸ್ಸು ಕಂಡಿತ್ತು.

Be the first to comment

Leave a Reply

Your email address will not be published. Required fields are marked *

Translate »
error: Content is protected !!