ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು ಕೋರಿ ಮತ್ತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಪರ ವಕೀಲರು ಸಲ್ಲಿಸಿರುವ ಹೊಸ ಅರ್ಜಿಯಲ್ಲಿ, “ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ” ಎಂಬ ಕಾರಣವನ್ನು ಉಲ್ಲೇಖಿಸಿ ಜಾಮೀನು ಮರುಪರಿಶೀಲನೆಗೆ ಮನವಿ ಮಾಡಲಾಗಿದೆ. ಈ ಅರ್ಜಿ ಏಪ್ರಿಲ್ 14ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದೆ. ಈ ಬಗ್ಗೆ ಮುಂದಿನ ವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ನಂತರ ದರ್ಶನ್ ಅವರನ್ನು ಕಳೆದ ವರ್ಷ ಆಗಸ್ಟ್ 14ರಂದು ಮತ್ತೆ ಬಂಧಿಸಲಾಗಿತ್ತು. ಪ್ರಸ್ತುತ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ರೇಣುಕಾ ಸ್ವಾಮಿ ಪ್ರಕರಣ ರಾಜ್ಯ ಹಾಗೂ ಚಿತ್ರರಂಗದಲ್ಲಿ ಭಾರೀ ಗಮನ ಸೆಳೆದಿದೆ. ಸುಪ್ರೀಂ ಕೋರ್ಟ್ ಮುಂದಿನ ತೀರ್ಪು ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ದರ್ಶನ್ ತಮ್ಮ ಗೆಳತಿ ಪವಿತ್ರಾ ಗೌಡ ಜತೆಗೂಡಿ ಅಭಿಮಾನಿ ರೇಣುಕಾ ಸ್ವಾಮಿ ಅವರನ್ನು ಅಪಹರಿಸಿ ಬಳಿಕ ಕೊಲೆ ಮಾಡಿದ ಆರೋಪ ಹೊತ್ತಿದ್ದಾರೆ.
_





Be the first to comment