ಕಾನ್ ಚಿತ್ರೋತ್ಸವದಲ್ಲಿ ಕನ್ನಡಿಗ ನಿರ್ದೇಶಕಿಯಿಂದ ಭಾಷಣ

ಈ ಬಾರಿ ನಡೆಯಲಿರುವ 79ನೇ ಕಾನ್ ಚಿತ್ರೋತ್ಸವದ ಅಂಗವಾಗಿ ಆಯೋಜನೆಗೊಳ್ಳಲಿರುವ ‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಕನ್ನಡದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ಅವರು ಭಾಷಣ ಮಾಡಲಿದ್ದಾರೆ.

22ರ  ಯುವ ಕನ್ನಡಿಗ ನಿರ್ದೇಶಕಿಗೆ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ‘ಸೆಪ್ಟೆಂಬರ್ 21’ ಸಿನಿಮಾಗೆ ಅವರು ನಿರ್ದೇಶನ ಮಾಡಿದ್ದಾರೆ.

ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಕರೆನ್ ಕ್ಷಿತಿ ಸುವರ್ಣ ಅವರು ಭಾಗವಹಿಸಲಿದ್ದಾರೆ. ಅವರ ಜೊತೆ ಫೋರ್ಬ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಮೋಯಿರಾ ಫೋರ್ಬ್ಸ್ ಹಾಗೂ ಇತರ ಮಹಿಳೆಯರು ವೇದಿಕೆ ಹಂಚಿಕೊಳ್ಳಲಿದ್ದಾರೆ.

ಮೇ 12 ಮತ್ತು 13ರಂದು ಕಾರ್ಯಕ್ರಮ ನಡೆಯಲಿದೆ. ಕರೆನ್ ಕ್ಷಿತಿ ಸುವರ್ಣ ಅವರು ಸಿನಿಮಾ, AI ಹಾಗೂ ಸಾಮಾಜಿಕ ಕ್ರಿಯಾಶೀಲತೆ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮ ಮರು-ಪ್ರಸಾರದ ಮೂಲಕ 10 ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಲಿದೆ. ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ‘ಸೆಪ್ಟೆಂಬರ್ 21’ ಸಿನಿಮಾ ಮೇ 16ರ ಸಂಜೆ 5.45ಕ್ಕೆ ಕಾನ್ ಚಿತ್ರೋತ್ಸವದಲ್ಲಿ ಪ್ರೀಮಿಯರ್ ಆಗಲಿದೆ.

ಸೆಪ್ಟೆಂಬರ್ 21’ ಚಿತ್ರ ಹಿಂದಿ ಮತ್ತು ಕನ್ನಡದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಆಲ್ಜೈಮರ್ ಕಾಯಿಲೆ ಮತ್ತು ಆರೈಕೆದಾರರ ಹೋರಾಟದ ಕುರಿತಾದ ಕಥೆ ಈ ಸಿನಿಮಾದಲ್ಲಿದೆ. ಪ್ರಿಯಾಂಕಾ ಉಪೇಂದ್ರ, ಪ್ರವೀಣ್ ಸಿಂಗ್ ಸಿಸೋಡಿಯಾ, ಝರೀನಾ ವಹಾಬ್, ಅಜಿತ್ ಶಿಧಾಯೆ, ಅಮಿತ್ ಬೆಹ್ಲ್ ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!