‘ ಕಿಂಗ್ ‘ ವಿಡಿಯೋ ಲೀಕ್

ಬಾಲಿವುಡ್ ಕಿಂಗ್ ಶಾರುಖ್ ಖಾನ್ ಮತ್ತು ನಟಿ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ‘ಕಿಂಗ್’ ಚಿತ್ರದ ಚಿತ್ರೀಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸದ್ಯ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಸಮುದ್ರ ತೀರದಲ್ಲಿ ಶಾರುಖ್ ಮತ್ತು ದೀಪಿಕಾ ಅವರು ರೊಮ್ಯಾಂಟಿಕ್ ಹಾಡಿನ ದೃಶ್ಯವೊಂದರಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸೋರಿಕೆಯಾದ ವಿಡಿಯೋದಲ್ಲಿ, ದೀಪಿಕಾ ಪಡುಕೋಣೆ ಬಿಳಿ ಬಣ್ಣದ ಉಡುಪಿನಲ್ಲಿ ಮಿಂಚುತ್ತಿದ್ದರೆ, ಶಾರುಖ್ ಖಾನ್ ಸ್ಟೈಲಿಶ್ ಆಗಿ ಡ್ರೆಸ್ ಮಾಡಿಕೊಂಡಿದ್ದಾರೆ. ಸೂರ್ಯಾಸ್ತದ ಹಿನ್ನೆಲೆಯಲ್ಲಿ ಇಬ್ಬರೂ ಪರಸ್ಪರ ಓಡಿ ಬಂದು ಅಪ್ಪಿಕೊಳ್ಳುವ ಮತ್ತು ಶಾರುಖ್ ಖಾನ್ ತಮ್ಮ ಸಿಗ್ನೇಚರ್ ಸ್ಟೈಲ್​​ನಲ್ಲಿ ಪೋಸ್ ನೀಡುವ ದೃಶ್ಯ ಈ ವಿಡಿಯೋದಲ್ಲಿ ಇದೆ.

‘ಕಿಂಗ್’ ಚಿತ್ರದ ದೃಶ್ಯಗಳು ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ಸಿದ್ದಾರ್ಥ್ ಆನಂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ‘ಎಲ್ಲಾ ಅಭಿಮಾನಿಗಳಲ್ಲಿ ನನ್ನದೊಂದು ವಿನಂತಿ. ದಯವಿಟ್ಟು ಕಿಂಗ್ ಚಿತ್ರದ ಸೆಟ್‌ನಿಂದ ಸೋರಿಕೆಯಾದ ಯಾವುದೇ ವಿಡಿಯೋ ಅಥವಾ ಫೋಟೋಗಳನ್ನು ಹಂಚಿಕೊಳ್ಳಬೇಡಿ. ನಿಮಗೆ ಅತ್ಯುತ್ತಮ ಸಿನಿಮಾ ಅನುಭವ ನೀಡಲು ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ಚಿತ್ರತಂಡ ಅಧಿಕೃತವಾಗಿ ದೃಶ್ಯಗಳನ್ನು ಬಿಡುಗಡೆ ಮಾಡುವವರೆಗೆ ಕಾಯಿರಿ’ ಎಂದು ಮನವಿ ಮಾಡಿದ್ದಾರೆ.

ಈ ಚಿತ್ರದ ಮೂಲಕ ಶಾರುಖ್ ಪುತ್ರಿ ಸುಹಾನಾ ಖಾನ್ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಭಿಷೇಕ್ ಬಚ್ಚನ್, ರಾಣಿ ಮುಖರ್ಜಿ, ಅರ್ಷದ್ ವಾರ್ಸಿ, ಅನಿಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಸಿನಿಮಾ ಈ ವರ್ಷ ಡಿಸೆಂಬರ್ 24ರಂದು ಕ್ರಿಸ್‌ಮಸ್ ವೇಳೆ ತೆರೆ ಕಾಣಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!