ತಮಿಳುನಾಡು ಸಿಎಂ ದಳಪತಿ ವಿಜಯ್ ನಟನೆಯ ‘ ಜನ ನಾಯಗನ್’ ಚಿತ್ರ ಮುಂದಿನ ಎರಡು ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಹೆಚ್ಚಿದೆ.
ಎಲ್ಲವೂ ಪ್ಲಾನ್ ಪ್ರಕಾರ ನಡೆದರೆ ಇನ್ನೆರಡು ವಾರಗಳಲ್ಲಿ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ” ಎಂದು ನಿರ್ಮಾಪಕ ಕೆ. ವೆಂಕಟ್ ಪ್ರಭು ಹೇಳಿದ್ದಾರೆ.
ಚಿತ್ರವು ಸದ್ಯ ಸೆನ್ಸಾರ್ ಮಂಡಳಿಯ ಅಂತಿಮ ಹಂತದ ಪ್ರಕ್ರಿಯೆಯಲ್ಲಿದ್ದು, ನಿರಂತರ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸೆನ್ಸಾರ್ ಸಮಸ್ಯೆಯಿಂದ ಈ ಚಿತ್ರ ಬಿಡುಗಡೆ ಆಗಿರಲಿಲ್ಲ. ತಮಿಳುನಾಡು ವಿಧಾನಸಭಾ ಚುನಾವಣೆಯ ಮುನ್ನ ಈ ಚಿತ್ರ ಬಿಡುಗಡೆ ಆಗಬೇಕಾಗಿತ್ತು. ಆದರೆ ಸೆನ್ಸಾರ್ ಮಂಡಳಿ ನಿರಂತರವಾಗಿ ಚಿತ್ರ ಬಿಡುಗಡೆಗೆ ತಡೆ ಉಂಟುಮಾಡಿದ ಕಾರಣ ಕೆವಿನ್ ಪ್ರೊಡಕ್ಷನ್ ಗೆ ಚಿತ್ರ ಬಿಡುಗಡೆಗೆ ತೊಂದರೆ ಉಂಟಾಯಿತು.
ಈ ಚಿತ್ರ ವಿಜಯ್ ಅವರ ಕೊನೆಯ ಚಿತ್ರ ಎನ್ನಲಾಗಿತ್ತು. ಈಗ ವಿಜಯ್ ತಮಿಳುನಾಡು ಮುಖ್ಯಮಂತ್ರಿ ಆಗಿರುವ ಕಾರಣ ಚಿತ್ರ ಸೂಪರ್ ಹಿಟ್ ಆಗುವ ಸಾಧ್ಯತೆ ಇದೆ. ವಿಜಯ್ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಳೆದ ಕೆಲವು ತಿಂಗಳಿನಿಂದ ಕಾಯುತ್ತಿದ್ದಾರೆ.
ಚಿತ್ರದ ಟೈಟಲ್ ಕಾರ್ಡ್‌ನಲ್ಲಿ ‘ಸಿಎಂ ದಳಪತಿ ವಿಜಯ್’ ಎಂಬ ವಿಶೇಷ ಉಲ್ಲೇಖ ಇರಲಿದೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ತಂದಿದೆ.





Be the first to comment