ರಜನಿಕಾಂತ್-ಕಮಲ್ ಸಿನಿಮಾದಲ್ಲಿ ತ್ರಿಶಾ?

ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ ನಟಿಸುತ್ತಿರುವ ‘KHxRK’ ಸಿನಿಮಾದಲ್ಲಿ ಸೌತ್ ಕ್ವೀನ್ ತ್ರಿಶಾ ಕೃಷ್ಣನ್ ನಾಯಕಿಯಾಗಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.

ತಮಿಳು ಚಿತ್ರರಂಗದಲ್ಲಿ ಕಳೆದ 22 ವರ್ಷಗಳಿಂದ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಅವರು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು ಭಾರಿ ಸಂಭಾವನೆ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ತ್ರಿಶಾ ಈ ಹಿಂದೆ ಕಮಲ್ ಹಾಸನ್ ಜೊತೆ ‘ಮನ್ಮದನ್ ಅಂಬು’, ‘ತೂಂಗಾ ವನಂ’, ‘ಥಗ್ ಲೈಫ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್ ಜೊತೆ ‘ಪೇಟ್ಟಾ’ ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದಾರೆ.

‘ಜೈಲರ್’ ಖ್ಯಾತಿಯ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸಿನಿಮಾಗೆ ಇದೆ. ಈಗಾಗಲೇ ಬಿಡುಗಡೆಯಾಗಿರುವ ಅನೌನ್ಸ್‌ಮೆಂಟ್ ವಿಡಿಯೋದಲ್ಲಿ ರಜನಿಕಾಂತ್ ಮತ್ತು ಕಮಲ್ ರೆಟ್ರೋ ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದು, ‘ಹೀರೋ ಯಾರು?’ ಡೈಲಾಗ್ ವೈರಲ್ ಆಗಿದೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ.

ಈಗ ನೆಲ್ಸನ್ ಸ್ಕ್ರಿಪ್ಟ್ ಮತ್ತು ತಾಂತ್ರಿಕ ವರ್ಗದ ಆಯ್ಕೆಯಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ರಜನಿಕಾಂತ್ ಕೊನೆಯ ಚಿತ್ರ ಇದಾಗಿದ್ದು, ದೊಡ್ಡ ಮಟ್ಟದ ನಿರೀಕ್ಷೆ ಚಿತ್ರದ ಮೇಲಿದೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!