ಸೂಪರ್ ಸ್ಟಾರ್ ಉಪೇಂದ್ರ ನಾಟಿಸಿ ನಿರ್ದೇಶಿಸಿರುವ ಉಪೇಂದ್ರ ಚಿತ್ರ ಜೂನ್ 4ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.
ಸುಮಾರು 100 ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಚಿತ್ರ ನೋಡುವ ಪ್ರೇಕ್ಷಕರಿಗೆ ನಗದು ರೂಪದಲ್ಲಿ ಬಹುಮಾನ ಸಿಗಲಿದೆ.
ಪ್ರತಿ ಶೋ ಮುಗಿದ ನಂತರ 10 ನಿಮಿಷಗಳ ಕಾಲ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಲಿದೆ. ಉತ್ತರ ನೀಡಿದ ಪ್ರೇಕ್ಷಕರಿಗೆ ಆ ನಿರ್ದಿಷ್ಟ ಶೋನ ಒಟ್ಟು ಕಲೆಕ್ಷನ್ ಹಣವನ್ನು ಬಹುಮಾನವಾಗಿ ನೀಡಲಾಗುತ್ತದೆ. ಸಿನಿಮಾ ಪ್ರದರ್ಶನದ 25ನೇ ದಿನದಂದು ಕೇಳಲಾಗುವ ಪ್ರಶ್ನೆಗೆ ನಿಖರ ಉತ್ತರ ನೀಡುವ ಒಬ್ಬ ಅದೃಷ್ಟಶಾಲಿ ಪ್ರೇಕ್ಷಕನಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಉದ್ಯಮಿ ಪರಮೇಶ್ವರ್ ಘೋಷಿಸಿದ್ದಾರೆ.
ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಮರಳಿ ಕರೆತರುವುದು, ಸಿನಿಮಾ ಬಿಡುಗಡೆಯಿಲ್ಲದ ಸಮಯದಲ್ಲಿ ಚಿತ್ರಮಂದಿರಗಳಿಗೆ ಚೈತನ್ಯ ತುಂಬುವುದು ಇದರ ಉದ್ದೇಶ ಎಂದು ಹೇಳಲಾಗಿದೆ.
ಚಿತ್ರ ಮರುಬಿಡುಗಡೆಗೆ ‘ಉಪೇಂದ್ರ’ ಚಿತ್ರದ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರು ಸಮ್ಮತಿ ಸೂಚಿಸಿದ್ದಾರೆ. ಮುಂದೆ ಸುದ್ದಿಗೋಷ್ಠಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಿರ್ಮಾಪಕರು ಭಾಗವಹಿಸಿ ಯೋಜನೆಯ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.





Be the first to comment