ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ಇನ್ನಿಲ್ಲ

ಕನ್ನಡದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಬೆಳಗಿನ ಜಾವ ಮನೆಯಲ್ಲಿದ್ದಾಗ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಪ್ರಯೋಜನ ಆಗಲಿಲ್ಲ. ಆಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಅವರಿಗೆ 47 ವರ್ಷ ವಯಸ್ಸಾಗಿತ್ತು.

ದಿಲೀಪ್ ರಾಜ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ದಿಲೀಪ್ ಅವರು 2005ರಲ್ಲಿ ಬಿಡುಗಡೆಯಾದ ಬಾಯ್ ಫ್ರೆಂಡ್ ಚಿತ್ರದ ಮೂಲಕ ನಾಯಕ ನಟನಾಗಿ ನಟನೆ ಆರಂಭಿಸಿದರು. 2007ರಲ್ಲಿ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಅಭಿನಯಿಸಿದ ಮಿಲನ ಚಿತ್ರ ಅವರಿಗೆ ಹೆಚ್ಚಿನ ಹೆಸರು ತಂದು ಕೊಟ್ಟಿತು.

ದಿಲೀಪ್ ರಾಜ್ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಇತ್ತೀಚಿನ ಚಿತ್ರವಾಗಿ ಲವ್ ಮಾಕ್ಟೇಲ್ 3 ಗಮನ ಸೆಳೆದಿತ್ತು. ಇದನ್ನು ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿದ್ದರು. ಈ ಚಿತ್ರ ಮಾರ್ಚ್ 16ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.

ಕಿರುತೆರೆಯಲ್ಲಿ ದಿಲೀಪ್ ರಾಜ್ ತಮ್ಮದೇ ಛಾಪು ಮೂಡಿಸಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅವರ ಅಭಿನಯ ಜನಪ್ರಿಯತೆಯನ್ನು ನೀಡಿತ್ತು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!