ತ್ರಿಷಾಗೆ ಭಾರೀ ಡಿಮ್ಯಾಂಡ್

ನಟ ವಿಜಯ್ ಸಿಎಂ ಆಗುತ್ತಿದ್ದಂತೆ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರ ವೃತ್ತಿ ಬದುಕಿನ ಗ್ರಾಫ್ ಮೇಲಕ್ಕೆ ಏರಿದೆ.

ಎರಡು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಯಶಸ್ಸಿನ ಪಯಣ ಮಾಡಿರುವ ತ್ರಿಶಾ ಅವರ ಸಂಭಾವನೆ ದಾಖಲೆ ಮಟ್ಟಕ್ಕೆ ಏರಿದೆ. ಕಾಲಿವುಡ್ ಮತ್ತು ಟಾಲಿವುಡ್‌ನ ಹಲವು ಬಿಗ್ ಬಜೆಟ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರು, ಪ್ರತಿ ಚಿತ್ರಕ್ಕೆ 10ರಿಂದ 12 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ದಕ್ಷಿಣ ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಸಾಲಿನಲ್ಲಿ ತ್ರಿಶಾ ಅಗ್ರಸ್ಥಾನಕ್ಕೇರಿದ್ದಾರೆ. ‘ಪೊನ್ನಿಯಿನ್ ಸೆಲ್ವನ್’ ಮತ್ತು ‘ಲಿಯೋ’ ಸಿನಿಮಾಗಳ ಭರ್ಜರಿ ಯಶಸ್ಸಿನ ಬಳಿಕ ತ್ರಿಶಾ ಅವರ ಮಾರುಕಟ್ಟೆ ಮೌಲ್ಯ ದೊಡ್ಡ ಮಟ್ಟಕ್ಕೆ ಏರಿಕೆಯಾಗಿದೆ.

ಈಗ ತ್ರಿಶಾ ಕೈಯಲ್ಲಿ ಹಲವು ದೊಡ್ಡ ಸಿನಿಮಾಗಳಿವೆ. ಚಿರಂಜೀವಿ ಅಭಿನಯದ ‘ವಿಶ್ವಂಭರ’ ಸಿನಿಮಾದಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಸೂರ್ಯ ಅಭಿನಯದ ‘ಕರುಪ್ಪು’ ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಕಮಲ್ ಹಾಸನ್ ಹಾಗೂ ರಜನಿಕಾಂತ್ ಕಾಂಬಿನೇಷನ್‌ನ ಹೊಸ ಸಿನಿಮಾಗೂ ತ್ರಿಶಾ ನಾಯಕಿಯಾಗುವ ಸಾಧ್ಯತೆ ಇದ್ದು ಚರ್ಚೆ ನಡೆಯುತ್ತಿದೆ.

ಗ್ಲಾಮರ್ ಪಾತ್ರಗಳಿಗೆ ಮಾತ್ರ ಸೀಮಿತವಾಗದೆ ನಟನಾ ಸಾಮರ್ಥ್ಯ ಇರುವ ಪಾತ್ರಗಳ ಮೂಲಕವೂ ತ್ರಿಶಾ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ಹೊಸ ನಟಿಯರ ಆಗಮನದ ನಡುವೆಯೂ ಅವರ ಬೇಡಿಕೆ ಹೆಚ್ಚುತ್ತಲೇ ಇದೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!