ವಿದೇಶದಲ್ಲಿ ವಿತರಣೆಗೆ ಹೊಂಬಾಳೆ ಫಿಲ್ಮ್ಸ್ ಮುಂದು

ಕನ್ನಡದ ಹೊಂಬಾಳೆ ಫಿಲ್ಮ್ಸ್ , ರಾಮ್ ಚರಣ್ ಅಭಿನಯದ ‘ಪೆದ್ದಿ’ ಚಿತ್ರದ ಓವರ್‌ಸೀಸ್ ಡಿಸ್ಟ್ರಿಬ್ಯೂಷನ್ ಹಕ್ಕನ್ನು ಪಡೆದುಕೊಂಡಿದೆ.

ಇದು ಹೊಂಬಾಳೆಯ ಮೊದಲ ಅಂತಾರಾಷ್ಟ್ರೀಯ ಸಿನಿಮಾ ಹಂಚಿಕೆ ಯೋಜನೆಯಾಗಿದೆ. ವಿಜಯ್ ಕಿರಗಂದೂರು ನೇತೃತ್ವದ ಹೊಂಬಾಳೆ ಫಿಲ್ಮ್ಸ್ ಈ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ.

ಜೂನ್ 4ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಇದನ್ನು ವಿದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಯೋಜನೆ ರೂಪಿಸಿದೆ. ಈ ಹಂಚಿಕೆ ಯಶಸ್ವಿಯಾದರೆ ಇನ್ನಷ್ಟು ದೊಡ್ಡ ಬಜೆಟ್ ಸಿನಿಮಾಗಳು ಹೊಂಬಾಳೆ ಸಂಸ್ಥೆಯನ್ನು ಹುಡುಕಿಕೊಂಡು ಬರುವ ಸಾಧ್ಯತೆ ಹೆಚ್ಚಿದೆ.

ಬುಚ್ಚಿ ಬಾಬು ಸಾನಾ ನಿರ್ದೇಶನ ‘ಪೆದ್ದಿ’ ಚಿತ್ರಕ್ಕಿದೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ. ರಾಮ್ ಚರಣ್ ಅವರ ಮಾಸ್ ಲುಕ್ ಈಗಾಗಲೇ ಸಿನಿಪ್ರೇಮಿಗಳ ಕುತೂಹಲ ಹೆಚ್ಚಿಸಿದೆ. ಕನ್ನಡದ ನಟ ಶಿವರಾಜ್‌ಕುಮಾರ್ ಪಾತ್ರ ಮಾಡಿದ್ದು ವಿಶೇಷ ಆಕರ್ಷಣೆಯಾಗಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!