ವೀಕ್ ಎಂಡ್`ಗೆ ಐವತ್ತು ದಿನಗಳ ಸಂಭ್ರಮ

ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ `ವೀಕ್ ಎಂಡ್` ಚಿತ್ರ ಬೆಂಗಳೂರಿನ ಕಾಮಾಕ್ಯ ಹಾಗೂ ಸಪ್ನ ಚಿತ್ರಮಂದಿರಗಳಲ್ಲಿ ಐವತ್ತು ದಿನಗಳನ್ನು ಪೂರೈಸಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ. ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆಯಿದೆ.

ಮಿಲಿಂದ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ. ಹಿರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!