ತಾಳಿ ಧರಿಸಿದ್ದಕ್ಕೆ ಕಂಗನಾ ಸ್ಪಷ್ಟನೆ

ಬಾಲಿವುಡ್ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಅವರು ತಾಳಿ ಧರಿಸಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಕಂಗನಾ ಅವರು ಗುಲಾಬಿ ಬಣ್ಣದ ಸಲ್ವಾರ್ ಸೂಟ್ ಧರಿಸಿ, ಕತ್ತಿನಲ್ಲಿ ಮಂಗಳಸೂತ್ರ ಹಾಗೂ ಕೈಯಲ್ಲಿ ಹಸಿರು ಬಳೆಗಳೊಂದಿಗೆ ಕಟ್ಟಡವೊಂದರಿಂದ ಹೊರಬಂದು ತಮ್ಮ ಕಾರಿನತ್ತ ತೆರಳುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದವು. ಇದನ್ನು ನೋಡಿ  ‘ಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರೆ’ ಎಂದು ನೆಟ್ಟಿಗರು ತೀರ್ಮಾನಿಸಿಬಿಟ್ಟಿದ್ದರು. ಈ ಕುರಿತು  ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕಂಗನಾ ರಣಾವತ್  ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

‘ನಾನು ಪ್ರತಿದಿನ ನಗರದ ಸುತ್ತಮುತ್ತ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುತ್ತೇನೆ. ಯಾರೋ ಒಬ್ಬರು ನನ್ನ ಕ್ಯಾರೆಕ್ಟರ್ ಮೇಕ್-ಅಪ್ ಲುಕ್‌ನ ಫೋಟೋವನ್ನು ಕ್ಲಿಕ್ಕಿಸಿದ್ದಾರೆ.  ನನಗೆ ಸಾಲು ಸಾಲು ಫೋನ್ ಕರೆಗಳು ಬರುತ್ತಿವೆ. ಅಷ್ಟಕ್ಕೂ ವಿವಾಹಿತ ಮಹಿಳೆಯ ಲುಕ್‌ನಲ್ಲಿ ಕಾಣಿಸಿಕೊಂಡರೆ ಅದರಲ್ಲಿ ಅಷ್ಟೊಂದು ದೊಡ್ಡ ವಿಷಯ ಏನಿದೆ? ನಟರು ಚಿತ್ರಗಳಿಗಾಗಿ ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡುತ್ತಾರೆ. ನಾನು ಎಂದಿಗೂ ರಹಸ್ಯವಾಗಿ ಮದುವೆಯಾಗುವುದಿಲ್ಲ. ಇದು ನನ್ನ ಪ್ರಾಮಿಸ್’ ಎಂದು ಅವರು ಹೇಳಿದ್ದಾರೆ.

‘ಎಮರ್ಜೆನ್ಸಿ’ ಚಿತ್ರದ ಸೋಲಿನ ನಂತರ ಕಂಗನಾ ಅವರು ‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ನಟಿಸಿದ್ದಾರೆ. 2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಆಸ್ಪತ್ರೆಯೊಂದರ ಒಳಗೆ ನಡೆಯುವ ನೈಜ ಘಟನೆ ಆಧಾರಿತ ಕಥೆಯನ್ನು ಈ ಸಿನಿಮಾ ತೋರಿಸಲಿದೆ. ಈ ಚಿತ್ರ ಜೂನ್ 12ರಂದು ತೆರೆಕಾಣಲು ಸಜ್ಜಾಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!