ಧರ್ಮೇಂದ್ರ ಸೇರಿದಂತೆ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಸೇರಿದಂತೆ 66 ಸಾಧಕರಿಗೆ 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದ್ದು, ಅವರ ಪರವಾಗಿ ಪತ್ನಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಲಯಾಳಂ ಚಿತ್ರರಂಗದ  ಸ್ಟಾರ್ ಮಮ್ಮುಟ್ಟಿ, ಸಂಗೀತ ಕ್ಷೇತ್ರದಲ್ಲಿ ಅನೇಕ ಸೂಪರ್‌ಹಿಟ್ ಗೀತೆಗಳನ್ನು ನೀಡಿದ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ ಪದ್ಮಭೂಷಣ  ಗೌರವಕ್ಕೆ ಪಾತ್ರರಾಗಿದ್ದಾರೆ.

‘3 ಇಡಿಯಟ್ಸ್’, ‘ರಾಕೆಟ್ರಿ’ ಖ್ಯಾತಿಯ ನಟ ಆರ್. ಮಾಧವನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಜೊತೆಗೆ ತಮ್ಮ ವಿಶಿಷ್ಟ ಹಾಸ್ಯ ಅಭಿನಯದಿಂದ ಮನೆಮಾತಾಗಿದ್ದ ದಿವಂಗತ ನಟ ಸತೀಶ್ ಶಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ನೀಡಿ ಗೌರವಿಸಲಾಗಿದೆ.

ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳು ಘೋಷಿಸಲ್ಪಟ್ಟಿದ್ದು, ಮೊದಲ ಹಂತದಲ್ಲಿ 2 ಪದ್ಮವಿಭೂಷಣ, 6 ಪದ್ಮಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ. ಚಿತ್ರರಂಗ, ಸಂಗೀತ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಗೌರವಕ್ಕೆ ಪಾತ್ರರಾಗಿದ್ದಾರೆ. ಉಳಿದ ಪ್ರಶಸ್ತಿಗಳನ್ನು ಮುಂದಿನ ಹಂತದಲ್ಲಿ ನೀಡಲಾಗುವುದು ಎಂದು ತಿಳಿಸಲಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!