‘ಚಾರ್ಜ್‌ಶೀಟ್ 03-08’ಗೆ U/A ಪ್ರಮಾಣಪತ್ರ

ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08′ ಗೆ ಸೆನ್ಸಾರ್ ಮಂಡಳಿ  U/A ಪ್ರಮಾಣಪತ್ರ ನೀಡಿದೆ.

ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಸಿಕ್ಕಿರುವುದರಿಂದ ಚಿತ್ರತಂಡಕ್ಕೆ ಸಂತಸ ಆಗಿದೆ. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಅವರ ಕಥಾಹಂದರವನ್ನು ಇಟ್ಟುಕೊಂಡು ಈ ಸಿನಿಮಾ ನಿರ್ಮಾಣ ಆಗಿದೆ.   ಚಿತ್ರವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶಿಸಿ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

‘ಎಂ.ಎಸ್ ಅರ್ಜುನ್ ಫಿಲ್ಮ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿರುವ  ಸಿನಿಮಾಗೆ ದಿನೇಶ್ ಮತ್ತು ಲಕ್ಷ್ಮಣ್  ನಿರ್ಮಾಪಕರು. ಸಿನಿಮಾದಲ್ಲಿ ಸುಂದರ್ ರಾಜ್, ಹರ್ಷ್ ಅರ್ಜುನ್, ಅಮರ್, ಸತ್ಯಶ್ರೀ, ರೂಪೇಶ್, ಡಾ. ಸುಧಾಕರ್ ಶೆಟ್ಟಿ, ಡಾ. ಪ್ರಮೋದ್, ಚೇತನ ಖೋಟ್, ವೆಂಕಟ್ ಭಾರದ್ವಾಜ್ ಮುಂತಾದವರು ನಟಿಸಿದ್ದಾರೆ.

ಚಿತ್ರದ ಪ್ರಚಾರ ಕಾರ್ಯಗಳನ್ನು ಈಗಾಗಲೇ ಆರಂಭಿಸಲಾಗಿದೆ. ಮೊದಲಿಗೆ ಟೀಸರ್,  ಹಾಡುಗಳು ಮತ್ತು ಕೊನೆಯಲ್ಲಿ ಟ್ರೇಲರ್ ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ರೂಪಿಸಿಕೊಂಡಿದೆ. ಚಿತ್ರದ ಪ್ರಚಾರವನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ  ಚೆನ್ನೈ, ಮುಂಬೈ ಸೇರಿದಂತೆ ಭಾರತದ ಪ್ರಮುಖ ಮೆಟ್ರೋ ನಗರಗಳಲ್ಲಿ ಪ್ರಚಾರ ಮಾಡಲು ತಂಡ ಸಜ್ಜಾಗಿದೆ.

‘ಚಾರ್ಜ್‌ಶೀಟ್ 03-08′ ಗೆ ಸಮೀರ್ ಕುಲಕರ್ಣಿ ಅವರು ಸಂಗೀತ,  ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಶಮೀಕ್ ವಿ. ಭರದ್ವಾಜ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ನೈಜವಾಗಿ ಸಾಗುವ ತನಿಖಾ ಶೈಲಿಯ ಕಥಾಹಂದರ  ಪ್ರೇಕ್ಷಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಸಿನಿಮಾದ ಆಡಿಯೋ ಹಕ್ಕುಗಳನ್ನು ‘A2 ಮ್ಯೂಸಿಕ್’ ಸಂಸ್ಥೆ ಪಡೆದುಕೊಂಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!