ಡೀಪ್ಫೇಕ್ ತಂತ್ರಜ್ಞಾನ ಬಳಸಿ ನಟಿ ರುಕ್ಮಿಣಿ ವಸಂತ್ ಅವರ ನಕಲಿ ವಿಡಿಯೋ ಹಾಗೂ ಚಿತ್ರಗಳನ್ನು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರುಕ್ಮಿಣಿ ವಸಂತ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಒಟ್ಟು 29 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದರಲ್ಲಿ 9 ಇನ್ಸ್ಟಾಗ್ರಾಂ ಖಾತೆಗಳು, 14 ಎಕ್ಸ್ ಖಾತೆಗಳು, 6 ಫೇಸ್ಬುಕ್ ಖಾತೆಗಳು ಸೇರಿವೆ.
ಎಐ ತಂತ್ರಜ್ಞಾನ ಬಳಸಿ ರುಕ್ಮಿಣಿ ಅವರ ಮುಖವನ್ನು ಬೇರೊಬ್ಬರ ದೇಹಕ್ಕೆ ಅಳವಡಿಸಿ ಅಶ್ಲೀಲ ಹಾಗೂ ತಪ್ಪು ಸಂದೇಶ ಸಾರುವ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.. ಸದ್ಯ ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ತಮ್ಮ ಗೌರವ ಮತ್ತು ವೈಯಕ್ತಿಕ ಪ್ರತಿಷ್ಠೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಡೀಪ್ಫೇಕ್ ವಿಡಿಯೋ ಹಾಗೂ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ ಎಂದು ರುಕ್ಮಿಣಿ ವಸಂತ್ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
—-





Be the first to comment