ಕಲರ್ಸ್ ಕನ್ನಡ ವಾಹಿನಿ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರ ಅಧಿಕೃತ ಪ್ರೋಮೋ ಬಿಡುಗಡೆ ಮಾಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಕುರಿತು ವಾಹಿನಿ ಮಹತ್ವದ ಘೋಷಣೆ ಮಾಡಿದೆ. ‘ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ… With Something Special’ ಕ್ಯಾಪ್ಷನ್ನೊಂದಿಗೆ ಹಂಚಿಕೊಳ್ಳಲಾದ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಆಗಿರುವ ‘ಬಿಗ್ ಬಾಸ್ ಕನ್ನಡ’ ಇದುವರೆಗೆ 12 ಯಶಸ್ವಿ ಸೀಸನ್ಗಳನ್ನು ಪೂರ್ಣಗೊಳಿಸಿದೆ. ಎಲ್ಲಾ ಸೀಸನ್ಗಳನ್ನೂ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಕಿಚ್ಚ ಸುದೀಪ್ ಮತ್ತೊಮ್ಮೆ ಹೊಸ ಸೀಸನ್ ನಿರೂಪಣೆ ಮಾಡಲಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮುಕ್ತಾಯಗೊಂಡ 12ನೇ ಸೀಸನ್ ಬಳಿಕ ಹೊಸ ಸೀಸನ್ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಕಲರ್ಸ್ ಕನ್ನಡ ವಾಹಿನಿಯ ಘೋಷಣೆ ವೀಕ್ಷಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಾರಿ ಯಾವ ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ ಎಂಬ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ.





Be the first to comment