‘ಬಿಗ್ ಬಾಸ್ ಕನ್ನಡ 13’ ಆಡಿಷನ್ ಶುರು

‘ಕಲರ್ಸ್ ಕನ್ನಡ’ ವಾಹಿನಿಯ  ‘ಬಿಗ್ ಬಾಸ್ ಕನ್ನಡ ಸೀಸನ್ 13’  ಈ ಬಾರಿ ಜನಸಾಮಾನ್ಯರ ಕನಸಿಗೆ ವೇದಿಕೆ ಕಲ್ಪಿಸಲು ಮುಂದಾಗಿದೆ.

ಈ ಬಾರಿ ಕೇವಲ ಸೆಲೆಬ್ರಿಟಿಗಳಷ್ಟೇ ಅಲ್ಲದೆ ಸಾಮಾನ್ಯ ಜನರಿಗೂ ಸ್ಪರ್ಧಿಸುವ ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಜನರಿಗೆ ಆಡಿಷನ್ ಮೂಲಕ ಮನೆ ಪ್ರವೇಶಿಸುವ ಅವಕಾಶ ನೀಡಲಾಗುತ್ತಿದೆ.

‘ಕೈ ತಟ್ಟಿ ಹುರಿದುಂಬಿಸಿದ್ದು ಸಾಕು, ತೊಡೆ ತಟ್ಟಿ ಅಖಾಡಕ್ಕೆ ಇಳಿಯಲು ಸಿದ್ಧವೇ?’ ಎಂಬ ಸಂದೇಶದೊಂದಿಗೆ ‘ಕಲರ್ಸ್ ಕನ್ನಡ’ ವಾಹಿನಿ ಹೊಸ ಪ್ರೋಮೋ ಬಿಡುಗಡೆ ಮಾಡಿದೆ. ಪ್ರೋಮೋದಲ್ಲಿ ಸಾಮಾನ್ಯ ಜನರನ್ನು ನೇರವಾಗಿ ಆಹ್ವಾನಿಸಲಾಗಿದೆ.

ಆಸಕ್ತರು ತಮ್ಮ ಪ್ರತಿಭೆಯನ್ನು ಪರಿಚಯಿಸುವ ಮೂರು ನಿಮಿಷಗಳ ವಿಡಿಯೋವನ್ನು ವಾಹಿನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದವರಿಗೆ ‘ಬಿಗ್ ಬಾಸ್ ಕನ್ನಡ 13’ರಲ್ಲಿ ಸ್ಪರ್ಧಿಸುವ ಅವಕಾಶ ದೊರೆಯಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಮುಂದುವರಿಯಲಿದ್ದಾರೆ.

ಈವರೆಗೆ ‘ಬಿಗ್ ಬಾಸ್ ಕನ್ನಡ’ದ 12 ಸೀಸನ್‌ಗಳು ಯಶಸ್ವಿಯಾಗಿ ಪ್ರಸಾರವಾಗಿದ್ದು,  13ನೇ ಸೀಸನ್‌ಗೆ ಸಿದ್ಧತೆಗಳು ನಡೆಯುತ್ತಿವೆ. ಇದುವರೆಗೆ ಸೆಲೆಬ್ರಿಟಿಗಳಿಗೆ ಮಾತ್ರ ಸೀಮಿತವಾಗಿದ್ದ ಅವಕಾಶವನ್ನು ಈಗ ಸಾಮಾನ್ಯ ಜನರಿಗೂ ವಿಸ್ತರಿಸಲಾಗಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!