ವಿಜಯ್ ಸೇತುಪತಿಗೆ ವಿಲನ್ ದುನಿಯಾ ವಿಜಯ್

ನಿರ್ದೇಶಕ ಪುರಿ ಜಗನ್ನಾಥ್ ಮತ್ತು ಬಹುಭಾಷಾ ನಟ ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಸಿನಿಮಾದಲ್ಲಿ ದುನಿಯಾ ವಿಜಯ್   ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ವಿಜಯ್ ಸೇತುಪತಿ ಅವರ ಖಡಕ್ ಡೈಲಾಗ್‌ನೊಂದಿಗೆ ಆರಂಭವಾಗುವ ಟೀಸರ್, ಆ್ಯಕ್ಷನ್, ಎಮೋಷನ್, ಸಸ್ಪೆನ್ಸ್‌ನಿಂದ ಗಮನ ಸೆಳೆಯುತ್ತದೆ.

ಚಿತ್ರದಲ್ಲಿ ವಿಜಯ್ ಸೇತುಪತಿ ಅಂಧ ಭಿಕ್ಷುಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಅವರ ಪಾತ್ರದ ಹಿಂದೆ ದೊಡ್ಡ ರಹಸ್ಯ ಅಡಗಿದೆ ಎಂಬ ಸುಳಿವನ್ನು ಟೀಸರ್ ನೀಡಿದೆ. ಮತ್ತೊಂದೆಡೆ ದುನಿಯಾ ವಿಜಯ್ ಅವರ ಭಯಾನಕ ಲುಕ್   ಸಿನಿಮಾದ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿದೆ. ನಾಯಕ-ಖಳನಾಯಕ ಮುಖಾಮುಖಿ ಚಿತ್ರದ ಹೈಲೈಟ್ ಆಗುವ ಸಾಧ್ಯತೆ ಹೆಚ್ಚಿದೆ.

ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರದ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಗೌಪ್ಯವಾಗಿಟ್ಟಿದ್ದರೂ, ಟೀಸರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್ ಮತ್ತೊಮ್ಮೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಮ್ಮ ಖದರ್ ತೋರಿಸಲು ಸಜ್ಜಾಗಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!