ವಿಜಯಲಕ್ಷ್ಮಿ ದರ್ಶನ್ ಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ

ವಿಜಯಲಕ್ಷ್ಮಿ ದರ್ಶನ್ ವಿರುದ್ಧ  ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈಯಕ್ತಿಕವಾಗಿ ನಿಂದನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

‘ಜಲಗಾರ ಯುನಿವರ್ಸಿಟಿ’ ಎಂಬ ಹೆಸರಿನ  ಸಾಮಾಜಿಕ ಜಾಲತಾಣ ಖಾತೆ ಮೂಲಕ ವಿಜಯಲಕ್ಷ್ಮಿ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪೋಸ್ಟ್‌ಗಳು ಮತ್ತು ಅಸಭ್ಯ ಕಾಮೆಂಟ್‌ಗಳನ್ನು ಮಾಡಲಾಗಿದೆ.

ವಿಜಯಲಕ್ಷ್ಮಿ ಸಿನಿಮಾ ನೋಡಲು ಹೋದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು  “ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ”, “ಅವಳ ಬಾಯ್‌ಫ್ರೆಂಡ್, ಗಂಡ ಜೈಲಿನಲ್ಲಿ” , “ಇವಳು ‘Rapid Driver’ ಕಾರಿನಲ್ಲಿ ಓಡಾಡುತ್ತಾಳೆ”  ಎಂದು ಆಕ್ಷೇಪಾರ್ಹವಾಗಿ ನಿಂದಿಸಲಾಗಿದೆ.

ಅತೀ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುವ ಜೊತೆಗೆ, ವಿಜಯಲಕ್ಷ್ಮಿ ಅವರು ದೂರು ನೀಡದಂತೆ ‘ವಿಜಿಗೆ ಕಂಪ್ಲೇಂಟ್ ಕೊಡಬೇಡ ಅಂತ ಹೇಳಿ ಪ್ಲೀಸ್’ ಎಂದು ಮನವಿ ಮಾಡುವ ರೀತಿಯಲ್ಲಿ ಒತ್ತಡ ಹೇರಲಾಗಿದೆ

.

ಸಾರ್ವಜನಿಕ ವ್ಯಕ್ತಿಗಳ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ  ಕಿರುಕುಳ ಮತ್ತು ಅವಹೇಳನಕಾರಿ ಕಾಮೆಂಟ್‌ಗಳ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಕಲಿ ಖಾತೆಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

——

 

Be the first to comment

Leave a Reply

Your email address will not be published. Required fields are marked *

Translate »
error: Content is protected !!