ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಚಿನ್ನಯ್ಯ,  ನಟ ಪ್ರಕಾಶ್ ರಾಜ್  ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಿ ಗಂಭೀರ ಆರೋಪಗಳನ್ನು ಮಾಡಿದ್ದಾನೆ.

ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ  ಬಗ್ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್ ಅವರು,  ‘ಪ್ರಸಾರವಾಗುತ್ತಿರುವ ಮಾಹಿತಿಗಳು ಸತ್ಯಕ್ಕೆ ದೂರವಾಗಿವೆ’ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಕಾಶ್ ರಾಜ್, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದ ಕಾರಣ ಸ್ಪಷ್ಟನೆ ನೀಡುವುದು ನನ್ನ ಜವಾಬ್ದಾರಿಯಾಗಿದೆ. ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ಖುದ್ದಾಗಿ ಮಾಧ್ಯಮಗಳ ಮುಂದೆ ಬಂದು ಸಂಪೂರ್ಣ ಪ್ರತಿಕ್ರಿಯೆ ನೀಡುತ್ತೇನೆ. ಅಲ್ಲಿಯವರೆಗೆ ಯಾರೂ ಗಾಳಿ ಸುದ್ದಿಗಳನ್ನು ನಂಬಬಾರದು” ಎಂದು ಮನವಿ ಮಾಡಿದ್ದಾರೆ.

ಚಿನ್ನಯ್ಯ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕಾಶ್ ರಾಜ್ ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಿ  ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಒತ್ತಡ ಮತ್ತು ಬೆದರಿಕೆ ಎದುರಿಸಿದ್ದೇನೆ ಎಂದು  ಆರೋಪಿಸಿದ್ದಾನೆ.

ಪ್ರಕರಣದಲ್ಲಿ ಹಲವಾರು ಹೆಸರುಗಳು ಉಲ್ಲೇಖವಾಗುತ್ತಿರುವುದರಿಂದ ವಿಚಾರ ಮತ್ತಷ್ಟು ಸಂಕೀರ್ಣಗೊಂಡಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!