ಮಾಡೆಲ್ ಲಗೇಜ್‌ನಲ್ಲಿ ಗಾಂಜಾ ಪತ್ತೆ

ಮಾಡೆಲ್ ಹರ್ಷ ಸನ್ನಿ ಅವರ ಲಗೇಜ್‌ನಲ್ಲಿ ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದ್ದು, ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಜೂನ್ 10ರ ಮಧ್ಯರಾತ್ರಿ ಬ್ಯಾಂಕಾಕ್‌ನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿದ್ದ ಹರ್ಷ ಸನ್ನಿ ಅವರ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಲಗೇಜ್ ಪರಿಶೀಲನೆ ನಡೆಸಿದರು. ಈ ವೇಳೆ ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12 ವ್ಯಾಕ್ಯೂಮ್ ಸೀಲ್ಡ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಎನ್‌ಡಿಪಿಎಸ್ ಫೀಲ್ಡ್ ಟೆಸ್ಟಿಂಗ್ ಕಿಟ್ ಮೂಲಕ ಪರಿಶೀಲಿಸಿದಾಗ ಅವು ಗಾಂಜಾ ಎಂದು ದೃಢಪಟ್ಟಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ಸುಮಾರು 12 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಹರ್ಷ ಸನ್ನಿ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬ್ಯಾಗ್‌ನಲ್ಲಿ ಮಾದಕ ವಸ್ತುಗಳಿವೆ ಎಂಬುದು ತನಗೆ ತಿಳಿದಿರಲಿಲ್ಲ ಎಂದು ಹರ್ಷ ಸನ್ನಿ ಹೇಳಿದ್ದಾರೆ.  ಬ್ಯಾಂಕಾಕ್‌ ನ ವ್ಯಕ್ತಿಯೊಬ್ಬರು ಭಾರತಕ್ಕೆ ಬ್ಯಾಗ್ ತಲುಪಿಸುವಂತೆ ಕೇಳಿದ್ದರು ಎಂದು ಅವರು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ಹಿಂದೆ ಯಾರಾದರೂ ಇದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!