ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಪತ್ನಿ ಸಂಗೀತಾ ಸ್ವರ್ಣಲಿಂಗಂ ದಂಪತಿಯನ್ನು ಮತ್ತೆ ಒಂದಾಗಿಸಲು ಕುಟುಂಬದ ಹಿರಿಯರು ಸಂಧಾನದ ಪ್ರಯತ್ನ ನಡೆಸುತ್ತಿರುವ ಮಾಹಿತಿ ಹೊರ ಬಿದ್ದಿದೆ.
ಕುಟುಂಬ ಸದಸ್ಯರು ಹಾಗೂ ಆಪ್ತರು ಇಬ್ಬರ ನಡುವಿನ ಭಿನ್ನಾಭಿಪ್ರಾಯ ನಿವಾರಣೆಗೆ ಮುಂದಾಗಿದ್ದಾರೆ. ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಸೇರಿದಂತೆ ಕುಟುಂಬದ ಹಿರಿಯರು ಈ ಸಂಧಾನ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಲಂಡನ್‌ನಲ್ಲಿ ವಾಸವಾಗಿದ್ದ ಸಂಗೀತಾ ಚೆನ್ನೈ ನಿವಾಸಕ್ಕೆ ಮರಳಿದ್ದು, ಇಬ್ಬರೂ ಒಂದೇ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ವರದಿಯಾಗಿದೆ.
ವಿಜಯ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ 1.6 ಕೆಜಿಯ ಬೆಳ್ಳಿ ಖಡ್ಗವನ್ನು ಕಾಣಿಕೆಯಾಗಿ ಅರ್ಪಿಸಿದ್ದರು. ಈ ಭೇಟಿಯ ಬಳಿಕ ಅವರ ವೈಯಕ್ತಿಕ ಬದುಕಿನ ಕುರಿತ ಚರ್ಚೆಗಳು ಗರಿಗೆದರಿವೆ. ಜೂನ್ 22ರಂದು ವಿಜಯ್ ಜನ್ಮದಿನ ಇರುವ ಹಿನ್ನೆಲೆಯಲ್ಲಿ ದಂಪತಿ ಒಟ್ಟಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ವಿಚ್ಛೇದನ ಊಹಾಪೋಹ ಕುರಿತು ವಿಜಯ್ ಅಥವಾ ಸಂಗೀತಾ ಕಡೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಿದ್ದಿಲ್ಲ.
—-





Be the first to comment