ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚಿನ್ನೇಗೌಡರು ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು, ಇಬ್ಬರು ಗಂಡುಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಬೆಂಬಲ ಅಪಾರವಾಗಿತ್ತು.ಅವರು ನಿರ್ಮಾಪಕಿಯಾಗಿದ್ದು’ ಸೇವಂತಿ ಸೇವಂತಿ’ ಸಿನಿಮಾ ನಿರ್ಮಿಸಿದ್ದರು.
ಜಯಮ್ಮ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
2023ರಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದರಿಂದ ಹೊರಬಂದಿದ್ದ ವಿಜಯ್ ರಾಘವೇಂದ್ರ ಕುಟುಂಬಕ್ಕೆ ಜಯಮ್ಮ ಅವರ ಸಾವು ಅಪಾರ ನೋವುಂಟು ಮಾಡಿದೆ.
—–





Be the first to comment