ಬಹುನಿರೀಕ್ಷಿತ ‘ರಾಮಾಯಣ’ ಚಿತ್ರ ನಿಗದಿಯಂತೆ ಈ ವರ್ಷದ ದೀಪಾವಳಿ ಹಬ್ಬದಂದೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.
ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸೇರಿದಂತೆ ಹಲವು ಸ್ಟಾರ್ ಕಲಾವಿದರು ಅಭಿನಯಿಸುತ್ತಿರುವ ‘ರಾಮಾಯಣ’ ಸಿನಿಮಾ ವಿಎಫ್ಎಕ್ಸ್ ಮರು ಕೆಲಸ, ಕೆಲವು ದೃಶ್ಯಗಳ ಮರು ಚಿತ್ರೀಕರಣ ಹಾಗೂ ಜಾಗತಿಕ ಪರಿಸ್ಥಿತಿಗಳ ಕಾರಣ ಮುಂದೂಡಿಕೆಯಾಗಬಹುದು ಎಂಬ ವರದಿಗಳು ಹರಿದಾಡಿದ್ದವು. ಆದರೆ ಈ ಎಲ್ಲ ವರದಿಗಳನ್ನು ಚಿತ್ರತಂಡ ತಳ್ಳಿ ಹಾಕಿದೆ.
ಚಿತ್ರ ನಿರ್ಮಾಣ ಕಾರ್ಯಗಳು ನಿಗದಿಯಂತೆ ಸಾಗುತ್ತಿವೆ. ಸಿನಿಮಾ ಹಿಂದಿ ಸೇರಿದಂತೆ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಲವು ಅಂತರರಾಷ್ಟ್ರೀಯ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಡ್ರೀಮ್ ಪ್ರಾಜೆಕ್ಟ್ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಸ್ಕರ್ ವಿಜೇತ ಹ್ಯಾನ್ಸ್ ಝಿಮ್ಮರ್ ಮತ್ತು ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದಾರೆ.
ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಚಿತ್ರದಎರಡನೇ ಭಾಗ 2027ರ ದೀಪಾವಳಿಗೆ ತೆರೆಗೆ ಬರಲಿದೆ.
—-





Be the first to comment