ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದ ಸಂಧ್ಯಾ ನಾಗರಾಜ್ ವಿರುದ್ಧ ದೂರು ದಾಖಲಾಗಿದೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪವಿತ್ರಾಗೌಡ ಅವರಿಗೆ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ. ಪ್ರತಿದಿನ ಹೊರಗಿನಿಂದ ಆಹಾರವನ್ನು ಬಾಕ್ಸ್ ಮೂಲಕ ತಲುಪಿಸಲಾಗುತ್ತಿದೆ. ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪವಿತ್ರಾಗೌಡ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ ಮಾನಹಾನಿಗೆ ಯತ್ನಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣದ ಮತ್ತೊಬ್ಬ ಆರೋಪಿ ರಶ್ಮಿ, ಸಂಧ್ಯಾ ನಾಗರಾಜ್ ವಿರುದ್ಧ ಪ್ರತ್ಯೇಕ ದೂರು ನೀಡಿದ್ದಾರೆ. ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಸಂಧ್ಯಾ ನಾಗರಾಜ್ ಹೇಳಿಕೆಗಳು ಹಾಗೂ ಪವಿತ್ರಾಗೌಡ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಮುಂದಿನ ತನಿಖೆ ನಡೆಸಲಿದ್ದಾರೆ.
—–





Be the first to comment