ವಿವಾದಿತ ‘ಬಾಸ್’ ಚಿತ್ರದ ಬಿಡುಗಡೆಗೆ ತಡೆ ಕೋರಿ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ , ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ವಿ. ಲವ ನಿರ್ದೇಶನ, ತನಿಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರ ಜೂನ್ 19ರಂದು ‘ಬಾಸ್’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದೆ. ಸೆನ್ಸಾರ್ ಮಂಡಳಿಯು ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ. ಈಗ ನ್ಯಾಯಾಲಯದ ಆದೇಶವೇ ಚಿತ್ರದ ಬಿಡುಗಡೆಗೆ ನಿರ್ಣಾಯಕವಾಗಲಿದೆ.
‘ಬಾಸ್’ ಚಿತ್ರ ಟೀಸರ್ ಬಿಡುಗಡೆಯಾದ ದಿನದಿಂದ ವಿವಾದದ ಕೇಂದ್ರಬಿಂದುವಾಗಿದೆ. ಟೀಸರ್‌ನಲ್ಲಿ ‘ನೈಜ ಘಟನೆಗಳ ಆಧಾರಿತ ಕಥೆ’ ಎಂಬ ಉಲ್ಲೇಖ ಮಾಡಲಾಗಿದ್ದು, ಚಿತ್ರಕಥೆ ದರ್ಶನ್‌ಗೆ ಸಂಬಂಧಿಸಿದ ಪ್ರಕರಣದ ಸುತ್ತಲೇ ಸಾಗುತ್ತದೆ ಎಂಬ ಆರೋಪಗಳು ಕೇಳಿ ಬಂದಿದ್ದವು.
ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದರ್ಶನ್ ಈ ಹಿಂದೆ ಸೆಷನ್ಸ್ ಕೋರ್ಟ್‌ನಲ್ಲಿ ಚಿತ್ರದ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ಚಿತ್ರತಂಡಕ್ಕೆ ತಾತ್ಕಾಲಿಕ ನೆಮ್ಮದಿ ಸಿಕ್ಕಿತ್ತು. ಆದರೆ ಈಗ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಹೈಕೋರ್ಟ್ ಮೊರೆ ಹೋಗಿ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಮೇಲ್ಮನವಿ ಸಲ್ಲಿಸಿದ್ದಾರೆ.
ಚಿತ್ರತಂಡ ‘ಬಾಸ್’ ಸಿನಿಮಾ ದರ್ಶನ್ ಜೀವನಾಧಾರಿತ ಚಿತ್ರವಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಟೀಸರ್‌ನ ಕೆಲವು ದೃಶ್ಯಗಳು, ಪಾತ್ರಗಳ ವಿನ್ಯಾಸ ಅನುಮಾನಗಳಿಗೆ ಕಾರಣವಾಗಿದೆ.
—–





Be the first to comment