ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ನಟ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪ್ರವಾಸಿಗರನ್ನು ಆಕರ್ಷಿಸಲು ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಕುರಿತು ಚರ್ಚಿಸಲಾಯಿತು.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ರೂಪಿಸುವ ಕುರಿತು ಚರ್ಚೆ ನಡೆಸಲಾಗಿತು. ಈ ನೀತಿಗೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಸರ್ಕಾರ ಮುಂದಿನ 20 ದಿನಗಳೊಳಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಚಿಂತನೆ ನಡೆಸಿದೆ.
ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಅಧಿಕಾರಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
—-





Be the first to comment