ಬಹುಭಾಷಾ ನಟ ಪ್ರಕಾಶ್ ರಾಜ್ಗೆ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿಗೊಳಿಸಿರುವುದಾಗಿ ವರದಿಯಾಗಿದೆ.
ವಕೀಲ ದಿಲೀಪ್ ಕುಮಾರ್ ಅವರು ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲಿಸಿ ಕರ್ನಾಟಕ, ತಮಿಳುನಾಡು, ತೆಲಂಗಾಣ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಪ್ರಕಾಶ್ ರಾಜ್ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
2019ರಲ್ಲಿ ಮೊದಲಿಗೆ ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೆ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿತ್ತು. ಆದರೆ ಯಾವುದೇ ಕ್ರಮ ಜರುಗಿಲ್ಲ ಎಂದು ಆರೋಪಿಸಿ ದೂರುದಾರರು ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪ್ರಕಾಶ್ ರಾಜ್ಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದರೂ ಅದಕ್ಕೆ ಸಮರ್ಪಕ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಆರೋಪ ಕುರಿತು ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಸ್ಪಷ್ಟತೆ ಸಿಗಲಿದೆ.
—-





Be the first to comment