ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಶೀಘ್ರದಲ್ಲೇ ತಾಯಿಯಾಗಲಿರುವುದನ್ನು ಖಚಿತಪಡಿಸಿದ್ದಾರೆ.
ಗರ್ಭಿಣಿಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಿರುವ ಸಮಂತಾ, ಕೆಲ ಸಮಯ ಸಿನಿಮಾಗಳಿಂದ ವಿರಾಮ ಪಡೆಯುವುದಾಗಿ ತಿಳಿಸಿದ್ದಾರೆ.
ಜೂನ್ 19ರಂದು ಬಿಡುಗಡೆಯಾದ ‘ಮಾ ಇಂಟಿ ಬಂಗಾರಂ’ ಚಿತ್ರದ ಭರ್ಜರಿ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಸಮಂತಾ, “ನನ್ನ ಆರೋಗ್ಯ ಮತ್ತು ವೈಯಕ್ತಿಕ ಜೀವನ ಗಮನದಲ್ಲಿಟ್ಟುಕೊಂಡು ‘ಮಾ ಇಂಟಿ ಬಂಗಾರಂ’ ಚಿತ್ರದ ಬಳಿಕ ನಾನು ಸಣ್ಣ ವಿರಾಮ ಪಡೆಯುತ್ತಿದ್ದೇನೆ. ನಾನು ಮೆಟರ್ನಿಟಿ ಲೀವ್‌ಗೆ ತೆರಳುತ್ತಿದ್ದೇನೆ. ನಂತರ ಹೊಸ ಶಕ್ತಿ ಮತ್ತು ಹೊಸ ಯೋಜನೆಗಳೊಂದಿಗೆ ಅಭಿಮಾನಿಗಳ ಮುಂದೆ ಬರುತ್ತೇನೆ” ಎಂದು ತಿಳಿಸಿದ್ದಾರೆ.
ಕೆಲ ವಾರಗಳಿಂದ ‘ಮಾ ಇಂಟಿ ಬಂಗಾರಂ’ ಚಿತ್ರದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ವೇಳೆ ಸಮಂತಾ ಅವರ ಬೇಬಿ ಬಂಪ್ ಗಮನ ಸೆಳೆದಿತ್ತು. ಇದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಗರ್ಭಿಣಿಯಾಗಿರುವ ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ ಸಮಂತಾ ಅಧಿಕೃತವಾಗಿ ವಿಷಯವನ್ನು ಬಹಿರಂಗಪಡಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸಮಂತಾ ಅವರು 2025ರಲ್ಲಿ ನಿರ್ದೇಶಕ ರಾಜ್ ನಿಡಿಮೋರು ಅವರನ್ನು ವಿವಾಹವಾಗಿದ್ದರು. ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್‌ಸಿರೀಸ್ ಸಮಯದಲ್ಲಿ ಆರಂಭವಾದ ಸ್ನೇಹ ಬಳಿಕ ಪ್ರೀತಿಗೆ ತಿರುಗಿತ್ತು. ಇದೀಗ ದಂಪತಿ ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
—-





Be the first to comment