ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ಯ ವಿಡಿಯೋ ಸಾಂಗ್ ಜುಲೈ ಎರಡನೇ ವಾರದಲ್ಲಿ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ.
‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ತೆರೆಕಾಣಲಿದೆ. ‘ಟಾಕ್ಸಿಕ್’ ಚಿತ್ರ ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ರೆಡಿ ಆಗಿದೆ. ಈ ಕಾರಣದಿಂದ ಜುಲೈನಿಂದ ಸಿನಿಮಾದ ಪ್ರಚಾರ ಕಾರ್ಯ ಆರಂಭ ಆಗಲಿದೆ.ಜುಲೈ ಎರಡನೇ ವಾರದಲ್ಲಿ ‘ತಬಾಹಿ’ಯ ವಿಡಿಯೋ ಸಾಂಗ್ ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇರಲಿವೆ ಎಂದು ಊಹಿಸಲಾಗಿದೆ.
‘ತಬಾಹಿ’ ಚಿತ್ರದ ಲಿರಿಕಲ್ ವರ್ಷನ್ ರಿಲೀಸ್ ಆಗಿದೆ. ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಳ್ಳುವ ಪ್ಲ್ಯಾನ್ ಇದ್ದಿದ್ದರಿಂದ ಕೇವಲ ಲಿರಿಕಲ್ ವಿಡಿಯೋ ರಿಲೀಸ್ ಮಾಡಲಾಗಿತ್ತು. ಸಿನಿಮಾ ರಿಲೀಸ್ಗೆ ಎರಡು ತಿಂಗಳು ಇರುವಾಗ ಈಗ ಚಿತ್ರದ ಪ್ರಚಾರ ಆರಂಭಿಸಲಾಗಿದೆ.
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂನ ಗೀತು ಮೋಹನ್ದಾಸ್ ನಿರ್ದೇಶನ ಇದೆ. ಹೈ-ಬಜೆಟ್ ಆ್ಯಕ್ಷನ್ ಓರಿಯಂಟೆಡ್ ಸಿನಿಮಾ ಇದಾಗಿದ್ದು, ಅಂತರರಾಷ್ಟ್ರೀಯ ಮಟ್ಟದ ಡ್ರಗ್ ಮಾಫಿಯಾ ಹಿನ್ನೆಲೆಯನ್ನು ಹೊಂದಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದೆ.
ಚಿತ್ರದಲ್ಲಿ ಯಶ್ ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾ ‘ಟಾಕ್ಸಿಕ್’ ದೇಶಾದ್ಯಂತ ದೊಡ್ಡ ನಿರೀಕ್ಷೆ ಹುಟ್ಟು ಹಾಕಿದೆ.
—-





Be the first to comment