‘ರಾಯರ ದರ್ಶನ’ ಆಲ್ಬಂ ಸಾಂಗ್ ಅದ್ದೂರಿ ರಿಲೀಸ್

ಗುರುರಾಘವೇಂದ್ರ ಸ್ವಾಮಿಗಳ ಪವಿತ್ರ ಸನ್ನಿಧಿ ಮಂತ್ರಾಲಯದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ‘ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಯಿತು.

ರಾಯರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಯರ ಮಠ, ಗುರು ರಾಘವೇಂದ್ರ ಸ್ವಾಮಿಗಳು ಹಾಗೂ ಪ್ರಸ್ತುತ ಪೀಠಾಧಿಪತಿಗಳ ಕುರಿತ  ‘ರಾಯರ ದರ್ಶನ’ ಆಲ್ಬಂ ಸಾಂಗ್ ನ್ನು ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀನಾಥ್, ತಾರಾ, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಸುಧಾರಾಣಿ, ನೆನಪಿರಲಿ ಪ್ರೇಮ್ ಸೇರಿದಂತೆ ಅನೇಕ ಕಲಾವಿದರು ಉಪಸ್ಥಿತರಿದ್ದರು. ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ವಿವಿಧ ಕಲಾವಿದರು ಭಕ್ತಿಗೀತೆಗಳು, ಹಾಡುಗಳು ಹಾಗೂ ನೃತ್ಯ ಪ್ರದರ್ಶನ ನೀಡಿದರು. ಈ ಭವ್ಯ ಸಂಗೀತ ಸಂಜೆ ಕಾರ್ಯಕ್ರಮ ಭಕ್ತಿಭಾವ ಮತ್ತು ಕಲಾತ್ಮಕ ಸೊಗಸಿನೊಂದಿಗೆ ಅದ್ದೂರಿಯಾಗಿ ನೆರವೇರಿತು.

ಆಲ್ಬಂ ಸಾಂಗ್  ನ್ನು ಸಂಗೀತ ನಿರ್ದೇಶಕರಾದ ಅಜನೀಶ್ ಬಿ ಲೋಕನಾಥ್, ಸಿಆರ್ ಬಾಬಿ ಹಾಗೂ ಎಬಿಬಿಎಸ್ ಸ್ಟುಡಿಯೋ ತಂಡದ ಸಹಯೋಗದಲ್ಲಿ ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ನಿರ್ಮಿಸಿದೆ. ಭಕ್ತಿಭಾವವನ್ನು ಸಂಗೀತದ ಮೂಲಕ ಪ್ರಸ್ತುತಪಡಿಸುವ ಉದ್ದೇಶದಿಂದ ಈ ಪ್ರಾಜೆಕ್ಟ್ ರೂಪುಗೊಂಡಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!