ತೆಲುಗಿನ ನಂದಮೂರಿ ಬಾಲಕೃಷ್ಣ ಅವರ 112ನೇ ಸಿನಿಮಾ ಅಮರಾವತಿಯಲ್ಲಿ ಅದ್ಧೂರಿಯಾಗಿ ಸೆಟ್ಟೇರಿದೆ.
ಚಿತ್ರದ ಮುಹೂರ್ತ ಸಮಾರಂಭಕ್ಕೆ ಆಂಧ್ರಪ್ರದೇಶ ಸಚಿವರಾದ ಕಂದುಲ ದುರ್ಗೇಶ್ ಕ್ಯಾಮೆರಾ ಚಾಲನೆ ನೀಡಿದರೆ, ನಾರಾ ಲೋಕೇಶ್ ಕ್ಲಾಪ್ ಮಾಡಿದರು. ಬಾಲಯ್ಯ ಪುತ್ರಿ ನಂದಮೂರಿ ತೇಜಸ್ವಿನಿ ಚಿತ್ರದ ಮೊದಲ ದೃಶ್ಯಕ್ಕೆ ನಿರ್ದೇಶನ ನೀಡಿದರು. ಸುರೇಶ್ ಬಾಬು, ಗೋಪಿಚಂದ್ ಮಲಿನೇನಿ, ವೆಂಕಟ ಸತೀಶ್ ಕಿಲಾರು ಹಾಗೂ ಸಾಹು ಗರಪಾಟಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
‘ಮಿರ್ಚಿ’, ‘ಶ್ರೀಮಂತುಡು’, ‘ಜನತಾ ಗ್ಯಾರೇಜ್’ ಹಾಗೂ ‘ಭರತ್ ಅನೆ ನೇನು’ ಚಿತ್ರಗಳ ಖ್ಯಾತಿಯ ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಕೊರಟಾಲ ಶಿವ ಹಾಗೂ ಬಾಲಯ್ಯ ಕಾಂಬಿನೇಷನ್ ಒಂದಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
ಎಸ್ಎಲ್ವಿ ಸಿನಿಮಾಸ್ ಹಾಗೂ ಯುವಸುಧಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಚೆರುಕುರಿ ಮತ್ತು ಸುಧಾಕರ್ ಮಿಕ್ಕಿಲಿನೇನಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ಪ್ರಸ್ತುತ ಬಾಲಯ್ಯ ಗೋಪಿಚಂದ್ ಮಲಿನೇನಿ ನಿರ್ದೇಶನದ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದು, ಕಾಕಿನಾಡ ಬಂದರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಆ ಬಳಿಕ 112ನೇ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
—-





Be the first to comment