ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ‘ಅಮೆರಿಕಾ ಅಮೆರಿಕಾ 2’ ಸಿನಿಮಾ ಘೋಷಿಸಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ಬಹುನಿರೀಕ್ಷಿತ ‘ಅಮೆರಿಕಾ ಅಮೆರಿಕಾ 2’ ಚಿತ್ರದ ಶೂಟಿಂಗ್ ಈಗಾಗಲೇ ಮುಕ್ತಾಯಗೊಂಡಿದೆ. ಇದನ್ನು ಅಮೆರಿಕಾದಲ್ಲಿಯೇ ಶೂಟಿಂಗ್ ಮಾಡಲಾಗಿದೆ. ಈ ಚಿತ್ರಕ್ಕೆ ಟೈಟಲ್ ಏನು ಅನ್ನುವ ಕುತೂಹಲವು ಇತ್ತು. ಇದೀಗ ಚಿತ್ರದ ಟೈಟಲ್ ನ್ನು ಅಧಿಕೃತವಾಗಿ ರಿವೀಲ್ ಮಾಡಿದ್ದು, ಅಮೆರಿಕಾ ಅಮೆರಿಕಾ-2 ಎಂದು ಘೋಷಿಸಲಾಗಿದೆ.
ಅಮೆರಿಕಾ ಅಮೆರಿಕಾ-2 ಚಿತ್ರದಲ್ಲಿ ನಿರೂಪ್ ಭಂಡಾರಿ ಅವರು ನಾಯಕರಾಗಿ ಅಭಿನಯಸಿದ್ದಾರೆ. ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಮತ್ತೊಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಶಾನ್ವಿ ಶ್ರೀವಾತ್ಸವ್ ಅವರು ನಾಯಕಿಯಾಗಿ ಅಭಿನಯಸಿದ್ದಾರೆ. ಮನೋ ಮೂರ್ತಿ ಸಂಗೀತ ಈ ಚಿತ್ರಕ್ಕೂ ಇದೆ.
ಚಿತ್ರದ ಪೋಸ್ಟರ್ ನ್ನು ನಾಗತಿಹಳ್ಳಿ ಚಂದ್ರಶೇಖರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನ ನೋಡಿದ ಪ್ರೇಕ್ಷಕರು ‘ಒಳ್ಳೆ ಕಲಾವಿದರನ್ನು ಆಯ್ಕೆ ಮಾಡಿದ್ದೀರಿ’ ಎಂದಿದ್ದಾರೆ.
29 ವರ್ಷಗಳ ಹಿಂದೆ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ಅಭಿನಯದ ‘ಅಮೆರಿಕಾ ಅಮೆರಿಕಾ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು.
—





Be the first to comment