ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಡ್ಯಾಡ್’ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ.
ಈ ವಿಷಯವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಮೈಸೂರಿನ ನಂದಿ ವಿಗ್ರಹದ ಎದುರು ಈ ಚಿತ್ರಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. 32 ವರ್ಷಗಳ ಹಿಂದೆ ಶಿವಣ್ಣ ಅಭಿನಯದ ಸೂಪರ್ ಹಿಟ್ ‘ಜಗ ಮೆಚ್ಚಿದ ಹುಡುಗ’ ಚಿತ್ರ ಇದೇ ಜಾಗದಲ್ಲಿ ಮುಹೂರ್ತ ಕಂಡಿತ್ತು.
ಕನ್ನಡ ಸೇರಿದಂತೆ ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಈ ಬಿಗ್ ಬಜೆಟ್ ಸಿನಿಮಾ ಮೂಡಿಬರುತ್ತಿದೆ. ಶಿವಣ್ಣ ವೈದ್ಯನ ಪಾತ್ರದಲ್ಲಿ ನಟಿಸಿರುವ ಪ್ಯಾನ್ ಇಂಡಿಯಾ ಚಿತ್ರವನ್ನು ಹರೀಶ್ ಪೆದ್ದಿ ನಿರ್ಮಿಸುತ್ತಿದ್ದಾರೆ. ನಿರ್ದೇಶಕ ಅನಿಲ್ ಕನ್ನೆಗಂಟಿ ‘ಕ್ಯಾಮೆರಾಗಳು ಆಫ್ ಆಗಿದ್ದರೂ ‘ಡ್ಯಾಡ್’ ಸಿನಿಮಾದ ಅಸಲಿ ಹಾರ್ಟ್‌ಬೀಟ್ ಈಗಷ್ಟೇ ಶುರುವಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರಾ , ಬಾಬು ಹಾಗೂ ಮಲಯಾಳಂನ ಖ್ಯಾತ ನಟ ಸೂರಜ್ ವೆಂಜರಮೂಡು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಿ.ಎಸ್. ಸುಧೀಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಹಾಗೂ ಬಿ. ರಾಜಶೇಖರ್ ಅವರ ಛಾಯಾಗ್ರಹಣವಿದೆ.
—-





Be the first to comment