ಹಿರಿಯ ನಟ ಬಿ.ಸಿ. ಪಾಟೀಲ್ ಅವರು ಇದೇ ಮೊದಲ ಬಾರಿಗೆ ಭಕ್ತಿ ಪ್ರಧಾನ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರು ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಯಲ್ಲಿ‘ಕರಟಗಿರಿಯ ದೇಸಾಯಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪತ್ನಿಯಾಗಿ ಅರುಣಾ ಬಾಲರಾಜ್ ಇದ್ದಾರೆ. ಈ ಭಕ್ತಿ ಪ್ರಧಾನ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ.





Be the first to comment